ದ್ವಿತೀಯ ಪಿಯುಸಿ ಫಲಿತಾಂಶ : ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ಟಾಪರ್ಸ್‌

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25 ನೇ ಸಾಲಿನ ಫಲಿತಾಂಶ ಪ್ರಕಟಿಸಲಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟಾರೆ ಶೇ 73.45 ರಷ್ಟು ಫಲಿತಾಂಶ ಬಂದಿದೆ. ಉಡುಪಿ ಜಿಲ್ಲೆ (Udupi) ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದರೆ ಉತ್ತರ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರು ದಕ್ಷಿಣ ಶೇ 85.36, ಬೆಂಗಳೂರು ಉತ್ತರ ಶೇ 83.31 ಫಲಿತಾಂಶ ದಾಖಲಿಸಿವೆ.
ದ್ವಿತೀಯ ಪಿಯುಸಿ ಫಲಿತಾಂಶ: ವಜ್ಞಾನ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದವರು…
ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಆರ್​.ದೀಕ್ಷಾ ಅವರು 600ಕ್ಕೆ 599 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. 600ಕ್ಕೆ 598 ಅಂಕ ಪಡೆದ ಬಿಂದು ನವಲೆ, ರಾಜ ಯದುವಂಶಿ ಯಾದವ್ ಹಾಗೂ ವಿಜೇತ್ ಜಿ. ಗೌಡ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

ಕಾಮರ್ಸ್ ವಿಭಾಗದಲ್ಲಿ ಮೊದಲ ರ್ಯಾಂಕ್
ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನರಾ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಮೊದಲ ರ್ಯಾಂಕ್ ಗಳಿಸಿದ್ದಾರೆ. ಇವರು 600 ಕ್ಕೆ ‌599 ಅಂಕ ಗಳಿಸಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತಮ್ಮ ಪಿಯು ಕಾಲೇಜಿನ ವಿದ್ಯಾರ್ಥಿನಿ 600ಕ್ಕೆ 598 ಅಂಕ ಪಡೆದ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ ‌597 ಅಂಕ ಗಳಿಸಿ ಮೊದಲ ರ್ಯಾಂಕ್ ಪಡೆದಿದ್ದಾರೆ.
600ಕ್ಕೆ 596 ಅಂಕ ಪಡೆದಿರುವ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದ ಶ್ರೀಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಬೆಂಗಳೂರಿನ ಲಾ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ಆರ್​.ಶ್ರೀಜಯದರ್ಶಿನಿ 600ಕ್ಕೆ 595 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ 600ಕ್ಕೆ 594 ಅಂಕ ಪಡೆದ ಹುಬ್ಬಳ್ಳಿಯ ವಿದ್ಯಾನಗರ ಪಿಯು ಕಾಲೇಜಿನ ವಿದ್ಯಾರ್ಥಿನಿ ಇನೇಷ್ಕಾ ನಡುಗಡ್ಡಿ 4ನೇ ಸ್ಥಾನ, ಮಜಲಟ್ಟಿ ಗ್ರಾಮದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕಾವೇರಿ ಪವಾಡಿ ಮಲ್ಲಾಪುರ 600ಕ್ಕೆ 594 ಅಂಕ ಪಡೆದು 5ನೇ ಸ್ಥಾನ ಗಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement