ಶಿವಮೊಗ್ಗ/ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಮೇಲೆ ಜಾರಿ ನಿರ್ದೇಶನಾಲಯ (ED0 ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ನಿವಾಸ ಸೇರಿದಂತೆ ಬೆಂಗಳೂರು ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ.
ಬ್ಯಾಂಕ್ಗೆ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ.) ಏಕಕಾಲಕ್ಕೆ ಬೆಂಗಳೂರು ಮತ್ತು ಶಿವಮೊಗ್ಗದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ.
ಸುಮಾರು 10ಕ್ಕೂ ಹೆಚ್ಚು ಅಧಿ ಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಕೆಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಂಜುನಾಥ ಗೌಡ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.
ಕೋಟ್ಯಂತರ ರೂ ಹಣ ದುರ್ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಡಿಸಿಸಿ ಬ್ಯಾಂಕ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ ಪೊಲೀಸರು 2014ರ ಅಕ್ಟೋಬರ್ 18ರಂದು ಚಾರ್ಜ್ಶೀಟ್ ಸಲ್ಲಿಸಿದ್ದರು.
ಬಳಿಕ ಇಡಿ ಇಸಿಐಆರ್ ದಾಖಲು ಮಾಡಿ ತನಿಖೆ ನಡೆಸಲು ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಮಂಜುನಾಥ ಗೌಡ ತಡೆಯಾಜ್ಞೆ ತಂದಿದ್ದರು. ನಂತರ ಇ.ಡಿ.ಕಾನೂನು ಹೋರಾಟ ನಡೆಸದ ನಂತರ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿತ್ತು.
ನಿಮ್ಮ ಕಾಮೆಂಟ್ ಬರೆಯಿರಿ