ಬೆಂಗಳೂರು : ಬಿಜೆಪಿ ಸರ್ಕಾರದ (BJP Government) ವಿರುದ್ಧ ಕೇಳಿಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್‌ಐಟಿ (SIT) ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಹೆಚ್. ಕೆ. ಪಾಟೀಲ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಆರೋಪ ಬಗ್ಗೆ ನ್ಯಾ. ನಾಗಮೋಹನ್‌ದಾಸ್ ಆಯೋಗ ವರದಿಯಲ್ಲಿ ಮಾಡಿರುವ ಶಿಫಾರಸ್ಸುಗಳು ಮತ್ತು ಉಲ್ಲೇಖಿಸಿರುವ ವ್ಯತ್ಯಾಸಗಳನ್ನು ಸಚಿವ ಸಂಪುಟ ಗಂಭೀರವಾಗಿ ಪರಿಗಣಿಸಿದೆ. ಅವುಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ತಿಳಿಸಿದ್ದಾರೆ.
ದೂರುಗಳ ಮಾಹಿತಿ ಕಲೆ ಹಾಕಿ ವರದಿಯನ್ನು ನೀಡಲಾಗಿದೆ. 3 ಲಕ್ಷ ಕಾಮಗಾರಿಗಳ ಪೈಕಿ 1729 ಕಾಮಗಾರಿಗಳ ಬಗ್ಗೆ ಆಪಾದನೆಗಳಿವೆ. ಯೋಜನೆ, ಹಣ ಬಿಡುಗಡೆ, ಎಲ್ಒಸಿ ಬಿಡುಗಡೆ ಸರಿಯಾದ ರೀತಿಯಲ್ಲಿ ಇಲ್ಲ. ಯಾವ ಪ್ರಮಾಣದಲ್ಲಿ ವ್ಯತ್ಯಾಸಗಳಾಗಿವೆ ಎಂಬುದನ್ನು ಚರ್ಚೆ ಮಾಡಲಾಗಿದೆ. ಅನುದಾನಕ್ಕಿಂತ ಹೆಚ್ಚು ಬಿಲ್ ಆಗಿದೆ, ಕಾಮಗಾರಿಗಳ ಬಗ್ಗೆ ಸಂಶಯಗಳಿವೆ. ಇದು ಗಂಭೀರವಾದ ವರದಿಯಾದ ಹಿನ್ನೆಲೆಯಲ್ಲಿ ಎಸ್‌ಐಟಿ ರಚನೆ ಮಾಡಲು ತೀರ್ಮಾನಿಸಿದ್ದೇವೆ. ಎರಡು ತಿಂಗಳಲ್ಲಿ ಕ್ರಮ ಕೈಗೊಳ್ಳಲು ಎಸ್ಐಟಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ