ಬೆಂಗಳೂರು: ಬೆಂಗಳೂರಿನ ಚಂದ್ರಾ ಲೇ ಔಟ್‌ನಲ್ಲಿ ಉದ್ಯಾನವನದ ಹೊರಗೆ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬುರ್ಖಾ ಧರಿಸಿದ ಯುವತಿಯೊಬ್ಬಳು ಯುವಕನೊಂದಿಗೆ ಸ್ಕೂಟರ್‌ನಲ್ಲಿ ಕುಳಿತಿದ್ದಾಗ, ಅಲ್ಲಿಗೆ ಬಂದ ನಾಲ್ವರು ಬೇರೆ ಸಮುದಾಯದ ವ್ಯಕ್ತಿಯೊಂದಿಗೆ ಮಾತನಾಡಿದ ಕಾರಣಕ್ಕಾಗಿ ಅವರಿಗೆ ತೊಂದರೆ ನೀಡಿದ್ದಾರೆ.
ಇವರಿಗೆ ಐವರು ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆ, ಬುರ್ಖಾ ಧರಿಸಿದ ಯುವತಿ ಹಾಗೂ ಯುವಕ ಉದ್ಯಾನವನದ ಹೊರಗೆ ಸ್ಕೂಟರ್‌ನಲ್ಲಿ ಕುಳಿತಿದ್ದಾಗ ಈ ಘಟನೆ ನಡೆದಿದೆ.
ಈ ಸಂಬಂಧ ಯುವತಿ ದೂರು ನೀಡಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಮೊದಲು ಯುವತಿಗೆ ಬೇರೆ ಧರ್ಮದ ವ್ಯಕ್ತಿಯೊಂದಿಗೆ ಯಾಕೆ ಕುಳಿತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಬುರ್ಖಾ ಧರಿಸಿ ಪುರುಷನೊಂದಿಗೆ ಕುಳಿತಿರುವ “ನಿನಗೆ ಏನಾದರೂ ನಾಚಿಕೆ ಇದೆಯೇ” ಎಂದು ಕೇಳಿದ್ದಾರೆ. ನಂತರ ಇಬ್ಬರನ್ನೂ ನಿಂದಿಸಿದ್ದಾರೆ. ನಂತರ ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ನಾವು ಸುಮ್ಮನೇ ಕುಳಿತು ಮಾತನಾಡುತ್ತಿದ್ದೆವು ಎಂದು ಹೇಳಿದರೂ ಕೇಳದೆ, ಹಲ್ಲೆ ನಡೆಸಿದ್ದಾರೆ. ಅಲ್ಲದೆ ನಿಮ್ಮ ತಂದೆ ತಾಯಿಗೆ ಹೇಳುತ್ತೇವೆ ಅವರ ನಂಬರ್ ಕೊಡಿ ಎಂದು ಬೆದರಿಕೆ ಹಾಕಿದ್ದಾರೆ. ವೀಡಿಯೊ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಯುವತಿಯ ದೂರಿನ ಆಧಾರದ ಮೇಲೆ, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅದರಲ್ಲಿ ಒಬ್ಬ ಅಪ್ರಾಪ್ತನೂ ಸೇರಿದ್ದಾನೆ.
ನಿಮ್ಮ ಕಾಮೆಂಟ್ ಬರೆಯಿರಿ