ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಾವು, ಹಲವರಿಗೆ ಗಾಯ

ಅನಕಪಲ್ಲಿ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ.
ಆರು ಜನರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಟಾಕಿ ಉತ್ಪಾದನಾ ಘಟಕವು ಜಿಲ್ಲೆಯ ಕೋಟವುಟ್ಲಾ ಮಂಡಲದ ಕೈಲಾಸ ಪಟ್ಟಣದಲ್ಲಿದೆ.
ಮೃತರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಪೂರ್ವ ಗೋದಾವರಿ ಜಿಲ್ಲೆಯ ಸಮರ್ಲಕೋಟದವರು ಎನ್ನಲಾಗಿದೆ. ಸ್ಥಳೀಯ ಮಾಹಿತಿಯ ಪ್ರಕಾರ, ರಾಕೆಟ್ ಪಟಾಕಿಗಳನ್ನು ತಯಾರಿಸಲು ಹೆಸರುವಾಸಿಯಾದ ಕಾರ್ಖಾನೆಯು ಮದುವೆ ಸೀಸನ್ ಕಾರಣ ಆರ್ಡರ್‌ಗಳ ಬೇಡಿಕೆಯನ್ನು ಪರಿಗಣಿಸಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನೇಮಿಸಿಕೊಂಡಿತ್ತು.

ಸ್ಫೋಟದಿಂದಾಗಿ ಉತ್ಪಾದನಾ ಘಟಕದ ಗೋಡೆಗಳು ಕುಸಿದವು. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನರಸಿಪಟ್ಟಣಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.
ಘಟನೆಯ ಬಗ್ಗೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ. “ಈ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ” ಎಂದು ಗೃಹ ಸಚಿವೆ ವಿ. ಅನಿತಾ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಒಂದೇ ದಿನದಲ್ಲಿ ಅತಿ ಹೆಚ್ಚು ಜೀವ ವಿಮಾ ಪಾಲಿಸಿಗಳು ಮಾರಾಟ ; ಗಿನ್ನೆಸ್ ವಿಶ್ವ ದಾಖಲೆ ಸ್ಥಾಪಿಸಿದ ಎಲ್‌ ಐಸಿ ; 24 ತಾಸಿನಲ್ಲಿ ಮಾಡಿದ ಪಾಲಿಸಿಗಳು ಎಷ್ಟೆಂದರೆ..

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement