ಬೆಂಗಳೂರು: 5ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಪರೀಕ್ಷೆಯ ಭಯದಿಂದ 21 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ದುರ್ಘಟನೆ ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯಲ್ಲಿ ನಡೆದಿದ್ದು, ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್‌ಮೆಂಟ್​​ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದಂತ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸೌಮ್ಯ ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನ ಹೊರಗಡೆ ಹೋಗುವುದಾಗಿ ಹೇಳಿ ಅಪಾರ್ಟ್‌ಮೆಂಟ್‌ ಟೆರಸ್‌ನ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ಸೌಮ್ಯ ಪರೀಕ್ಷಾ ಸಮಯದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಆತ್ಮಹತ್ಯೆಗೂ ಮುನ್ನ ಯಾವುದೇ ಡೆತ್​ ನೋಟ್​ ಬರೆದಿಟ್ಟಿಲ್ಲ. ಸದ್ಯ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಶವಂತಪುರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ಓದುತ್ತಿದ್ದ ಸೌಮ್ಯ ತಮ್ಮ ತಂದೆ, ತಾಯಿ ಮತ್ತು ಸಹೋದರನ ಜತೆ ವಾಸವಾಗಿದ್ದರು. ಸೌಮ್ಯ ತಂದೆ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, . ಮೂಲತಃ ಆಂಧ್ರದವರು ಹಾಗೂ ಮಗಳನ್ನು ಓದಿಸುವ ಉದ್ದೇಶಕ್ಕೆ ಕುಟುಂಬ ಸಮೇತ ಬೆಂಗಳೂರಿಗೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement