ಅಯೋಧ್ಯೆ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ; ತನಿಖೆಗೆ ಆದೇಶ

ಅಯೋಧ್ಯಾ : ನೂತನವಾಗಿ ನಿರ್ಮಿಸಿ ಕಳೆದ ವರ್ಷ ಉದ್ಘಾಟನೆಗೊಂಡ ಅಯೋಧ್ಯೆಯ ರಾಮ ಮಂದಿರ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದೆ. ನಂತರ, ದೇವಾಲಯಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಅಯೋಧ್ಯೆಯ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿದ ನಂತರ, ಸೈಬರ್ ಸೆಲ್ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ.
ವರದಿಗಳ ಪ್ರಕಾರ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸೋಮವಾರ ರಾತ್ರಿ ಬೆದರಿಕೆ ಪತ್ರ ಬಂದಿದೆ. ಇದರ ನಂತರ, ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಅಯೋಧ್ಯೆಯಲ್ಲಿ ಮಾತ್ರವಲ್ಲದೆ ಬಾರಾಬಂಕಿ ಮತ್ತು ಇತರ ನೆರೆಯ ಜಿಲ್ಲೆಗಳಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಮ ಜನ್ಮಭೂಮಿ ಟ್ರಸ್ಟ್ ಕಚೇರಿಯ ಲೆಕ್ಕಪತ್ರ ಅಧಿಕಾರಿ ಮಹೇಶಕುಮಾರ ದೂರು ದಾಖಲಿಸಿದ್ದಾರೆ.

ಆದಾಗ್ಯೂ, ಇಮೇಲ್ ಅನ್ನು ಇಂಗ್ಲಿಷ್‌ನಲ್ಲಿ ಬರೆದಿದ್ದಾರೆ ಎಂಬುದನ್ನು ಹೊರತುಪಡಿಸಿ, ಪೊಲೀಸರು ಮಾಧ್ಯಮಗಳೊಂದಿಗೆ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ. ಸೋಮವಾರದ ಮಧ್ಯರಾತ್ರಿ ಇಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಈವರೆಗೆ, ರಾಮ ಮಂದಿರ ಟ್ರಸ್ಟ್ ಅಥವಾ ಭದ್ರತಾ ಸಂಸ್ಥೆಗಳು ಯಾವುದೇ ಅಧಿಕೃತವಾಗಿ ಮಾಹಿತಿ ನೀಡಿಲ್ಲ.
ಕೆನಡಾದಲ್ಲಿ ವಾಸಿಸುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ನವೆಂಬರ್‌ನಲ್ಲಿ ರಾಮ ಮಂದಿರದ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ ವೀಡಿಯೊ ಸಂದೇಶದಲ್ಲಿ, ನವೆಂಬರ್ 16–17 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಕ್ತಪಾತವಾಗಲಿದೆ ಎಂದು ಬೆದರಿಕೆ ಹಾಕಿದ್ದ.

ಪ್ರಮುಖ ಸುದ್ದಿ :-   ಹೈದರಾಬಾದ್‌ ಕ್ರಿಕೆಟ್‌ ಸ್ಟೇಡಿಯಂ ಸ್ಟ್ಯಾಂಡ್‌ ನಿಂದ ಮೊಹಮ್ಮದ್ ಅಜರುದ್ದೀನ್ ಹೆಸರು ತೆಗೆದುಹಾಕಲು ಆದೇಶ...

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement