ಹಿರಿಯ ಪತ್ರಕರ್ತ ಶ್ಯಾಮಸುಂದರ ನಿಧನ

ಬೆಂಗಳೂರು : ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ (೭೨) ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.
ಕನ್ನಡ ಪತ್ರಿಕೋದ್ಯಮದಲ್ಲಿ ಸುಮಾರು 39 ವರ್ಷಗಳಿಗೂ ಹೆಚ್ಚಿನ ಅನುಭವ ಹೊಂದಿದ್ದರು. ಈ ಅವಧಿಯಲ್ಲಿ ಅವರು ವಿಶೇಷವಾಗಿ ಡಿಜಿಟಲ್ ಪತ್ರಿಕೋದ್ಯಮ ವಲಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ಕನ್ನಡ ಡಿಜಿಟಲ್‌ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ನೀಡಿದ್ದರು.
ಶ್ಯಾಮಸುಂದರ ಅವರು ಸುದ್ದಿ ವಾಹಿನಿಗಳ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸುತ್ತಿದ್ದರು. ಎದ್ದೇಳು ಮಂಜುನಾಥ ಸಿನಿಮಾದಲ್ಲಿಯೂ ನಟಿಸಿದ್ದರು. ಮೂಲತಃ ಚಿತ್ರದುರ್ಗ ಜಿಲ್ಲೆ ಜಾನಕೊಂಡದವರಾಗಿದ್ದ ಶ್ಯಾಮಸುಂದರ್, ಬೆಂಗಳೂರಿನಲ್ಲಿ ವಾಸವಿದ್ದರು. ಅವಿವಾಹಿತರಾಗಿದ್ದರು.
ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಕ್ಷೀಣಿಸಿದ್ದರಿಂದ ಅವರು ಕೋಮಾಗೆ ಜಾರಿದ್ದರು. ಸತತವಾಗಿ ಚಿಕಿತ್ಸೆ ನೀಡಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement