ಬೆಳಗಾವಿ: ಇಲ್ಲಿಯ ಹೊಸ ಗಾಂಧಿ ನಗರದಲ್ಲಿ ಬುಧವಾರ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ಸರವಿ (38) ಮತ್ತು ಶಿವಲಿಂಗ ಸರವಿ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹೊಸ ಗಾಂಧಿ ನಗರದ ಪೈ ರೆಸಾರ್ಟ್ ಹಿಂದಿನ ರಸ್ತೆಯ ಬದಿ ಮಣ್ಣು ಅಗೆಯುತ್ತಿದ್ದರು. ಮೊದಲು ಜೆಸಿಬಿಯಿಂದ ಅಗೆಯಲಾಗಿತ್ತು. ಪೈಪ್‌ಲೈನ್ ಅಳವಡಿಕೆಗೆ ಆಳವಾಗಿ ಅಗೆಯಲು ಕಾರ್ಮಿಕರು ಕೆಳಗೆ ಇಳಿದಿದ್ದರು. ಆಗ ಮೇಲಿನಿಂದ ಮಣ್ಣು ಕುಸಿದು ಇಬ್ಬರು ಅದರಡಿ ಸಿಲುಕಿದರು. ಜೊತೆಗಿದ್ದ ಕಾರ್ಮಿಕರು ಹಾಗೂ ಸುತ್ತಲಿನ ಜನ ಸಹಾಯಕ್ಕೆ ಧಾವಿಸಿದರು. ಆದರೆ, ಮತ್ತಷ್ಟು ಮಣ್ಣು ಕುಸಿಯುವ ಭೀತಿ ಇದ್ದುದರಿಂದ ಜೆಸಿಬಿಯಿಂದ ಮಣ್ಣು ಎತ್ತಲಾಯಿತು. ಕಾರ್ಮಿಕರನ್ನು ಹೊರಕ್ಕೆ ತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಅಷ್ಟೊತ್ತಿಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ