ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಕಾರು ಅಪಘಾತ ಪ್ರಕರಣ ; ಮಹಾರಾಷ್ಟ್ರದ ಲಾರಿ ಚಾಲಕನ ಬಂಧನ

ಬೆಳಗಾವಿ: ಕಿತ್ತೂರು ‌ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ದ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನ ತಕ್ರಾರವಾಡಿ ಗ್ರಾಮದ ಮಧುಕರ ಕೊಂಡಿರಾಮ ಸೋಮವಂಶ(65) ಬಂಧಿತನಾಗಿದ್ದಾನೆ. ಜನವರಿ 14 ರಂದು ಅಂಬಡಗಟ್ಟಿ ಗ್ರಾಮದ ಬಳಿ ಅಪಘಾತವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಿಗೆ ಅಪಘಾತ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕನ ವಿರುದ್ಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಹೆಬ್ಬಾಳ್ಕರ್ ಕಾರು ಚಾಲಕ ಹಿಟ್ ಆ್ಯಂಡ್ ರನ್ ಪ್ರಕರಣ ದಾಖಸಿದ್ದರು. ಕಾರಿಗೆ ಡಿಕ್ಕಿ ಹೊಡೆದಿದ್ದ ಲಾರಿಯ ಬಣ್ಣ ಸೇರಿ ಸ್ಥಳದಲ್ಲಿ ಸಿಕ್ಕ ಸಾಕ್ಷಿಗಳನ್ನು ಪೊಲೀಸರು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಲಾರಿ ಪತ್ತೆ ಹಚ್ಚಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್‌ಪಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement