ಬೆಂಗಳೂರು: ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಪ್ರವೀಣ ಗೌಡ ಎಂಬವರು ಫೇಸ್ ಬುಕ್ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನೇಕಲ್‌ನ ಎಸ್‌ವಿಎಂ ಸ್ಕೂಲ್ ಬಳಿ ಬಿಜೆಪಿ ಕಾರ್ಯಕರ್ತ ಪ್ರವೀಣ ಗೌಡ ಬೇಲೂರು (35) ಎಂಬುವವರು ಫೇಸ್‌ಬುಕ್ ವೀಡಿಯೊ ಮಾಡಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರವೀಣ್ ಗೌಡ ತಮ್ಮ ಫೇಸ್ ಬುಕ್ ವಿಡಿಯೋದಲ್ಲಿ ಹಲವರ ಮೇಲೆ ವಂಚನೆ ಮತ್ತು ಹಲ್ಲೆ ಆರೋಪ ಮಾಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರ ಕಾರಣರಾಗಿದ್ದಾರೆ. ಹಣದ ವಿಚಾರವಾಗಿ ಮಾತುಕತೆಗೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಪ್ರವೀಣ್ ಫೇಸ್‌ಬುಕ್ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಹಾಗೂ ಕೆಲವರ ಹೆಸರು ಉಲ್ಲೇಖಿಸಿದ್ದಾರೆ.
ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನ ಪರಿಶೀಲಿಸಬೇಕು. ಪೊಲೀಸರು ನ್ಯಾಯ ದೊರಕಿಸಿ ಕೊಡಬೇಕೆಂದು ಮನವಿ ಮಾಡಿಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ವೀಡಿಯೊವನ್ನು ಫೇಸ್ಬುಕ್‌ನಲ್ಲಿ ಪೋಸ್ಟ್ ಮಾಡಿ, ನೇಣಿಗೆ ಶರಣಾಗಿದ್ದಾರೆ
ನಿಮ್ಮ ಕಾಮೆಂಟ್ ಬರೆಯಿರಿ