ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ರಕ್ತದ ಮಡವಿನಲ್ಲಿ ಬಿದ್ದಿರುವ 68 ವರ್ಷದ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ.
1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪತ್ನಿಯೇ ತನ್ನ ಪತಿ ಮೃತಪಟ್ಟಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಮನೆಯಲ್ಲೇ ಮೃತದೇಹ ಪತ್ತೆಯಾಗಿದ್ದರಿಂದ ಪೊಲೀಸರು ಪತ್ನಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರಿಗೆ 68 ವರ್ಷ ವಯಸ್ಸಾಗಿತ್ತು. 1981ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಅವರು ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. 2015ರ ಅವಧಿಯಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ವಾಸವಿದ್ದರು.
ಓಂ ಪ್ರಕಾಶ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಅವರು ತಮ್ಮ ಪತ್ನಿ ಪಲ್ಲವಿ ಜತೆ ವಾಸಿಸುತ್ತಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬಿಹಾರದ ಚಂಪಾರಣ್ ಜಿಲ್ಲೆಯರಾದ ಓಂ ಪ್ರಕಾಶ ಅವರು ಬಳ್ಳಾರಿಯ ಹರಪನಹಳ್ಳಿ ಉಪವಿಭಾಗದ ಎಎಸ್‌ಪಿಯಾಗಿದ್ದರು. ಬಳಿಕ ರಾಜ್ಯ ಜಾಗೃತ ಆಯೋಗ ಮತ್ತು ಕರ್ನಾಟಕ ಲೋಕಾಯುಕ್ತ ಎಸ್‌ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಎಸ್‌ಪಿಯಾಗಿದ್ದರು.
ಅವರು ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ನಾಗರಿಕ ರಕ್ಷಣಾ ನಿರ್ದೇಶಕ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಓಂ ಪ್ರಕಾಶ ಅವರು 2015ರ ಮಾರ್ಚ್ 1ರಂದು ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ