ಜನಿವಾರ ವಿವಾದ | ವಿದ್ಯಾರ್ಥಿ ಸುಚಿವ್ರತಗೆ ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಉಚಿತ ಪ್ರವೇಶ; ಸಚಿವ ಈಶ್ವರ ಖಂಡ್ರೆ

ಬೀದರ : ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿ ಸುಚಿವ್ರತ ಪರೀಕ್ಷೆ ವಂಚಿತರಾಗಿದ್ದು, ಈ ಹಿನ್ನೆಲೆಯಲ್ಲಿ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದ್ದಾರೆ.
ಇಂದು, ಭಾನುವಾರ ಬೆಳಿಗ್ಗೆ ಸಚಿವ ರಹೀಂಖಾನ್ ಅವರ ಜೊತೆ ಸುಚಿವ್ರತ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಸಚಿವ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದ್ದು, ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ.

ಇಂತಹ ಘಟನೆ ನಡೆಯಬಾರದಾಗಿತ್ತು. ಇದು ನನ್ನ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೆ, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವೂ ಆಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬುದು ಎಲ್ಲರ ಭಾವನೆ, ಹೀಗಾಗಿ ಭಾಲ್ಕಿಯ ತಮ್ಮ ಎಂಜಿನಿಯರಿಂಗ್ ಕಾಲೇಜಿನಲ್ಲಿ ಉಚಿತ ಸೀಟ್ ನೀಡುವುದಾಗಿ ಅವರು ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ಸುಚಿವ್ರತ ಅವರಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಕಾಮೆಡ್ ಕೆ ಪರೀಕ್ಷೆ ಬರೆಯಲೂ ವಿದ್ಯಾರ್ಥಿಗೆ ಅವಕಾಶವಿದೆ. ಅಲ್ಲಿ ಸೀಟು ಲಭಿಸಿದರೂ ನೆರವು ನೀಡಲಾಗುವುದು, ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟಂಬದ ಸದಸ್ಯರ ಬೆಂಬಲಕ್ಕಿದೆ ಎಂದು ತಿಳಿಸಿದರು.

3.8 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement