ವಾಯು ವಿಹಾರಕ್ಕೆ ಹೋಗಿದ್ದ ಕಾರವಾರ ನಗರಸಭೆ ಮಾಜಿ ಸದಸ್ಯನ ಹತ್ಯೆ

ಕಾರವಾರ: ನಗರಸಭೆಯ ಮಾಜಿ ಸದಸ್ಯ ಸತೀಶ ಕೊಳಂಬಕರ ಅವರನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭಾನುವಾರ ನಗರದಲ್ಲಿ ಸಂಭವಿಸಿದೆ.
ಸತೀಶ ಅವರು ಭಾನುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ಮಾರುಕಟ್ಟೆ ಬಳಿ ಆಗಮಿಸಿದ್ದರು. ಇದನ್ನು ಗಮನಿಸಿದ ಹಂತಕ ನಗರದ ಬಿಎಸ್ ಎನ್ ಎಲ್ ಕಚೇರಿ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇಬ್ಬರು ವ್ಯಕ್ತಿಗಳು ಇವರ ಜೊತೆ ಜಗಳಕ್ಕೆ ನಿಂತು ನಂತರ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ. ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಭಾನುವಾರರ ಸಂತೆ ಮಾರುಕಟ್ಟೆ ಇದ್ದರೂ ಅಪರಿಚಿತ ವ್ಯಕ್ತಿಗಳು ಕೊಲೆ ಮಾಡಿದ್ದಾರೆ. ಇದರಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಸ್ಕೂಟಿಯಲ್ಲಿ ಬಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ ಎಂದು ಸ್ಥಳೀಯರು ಗಮನಿಸಿದ್ದಾರೆ. ಹತ್ಯೆಯಾದ ಸತೀಶ ಕೊಳಂಬಕರ ಅವರನ್ನು ಪೊಲೀಸರು ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಹೇಳಲಾಗಿದೆ.
ಘಟನೆ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧೀಕಾರಿ ಎಂ ನಾರಾಯಣ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆಯಾದ ವ್ಯಕ್ತಿ ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ ಮೇಲೆ ೮ಕ್ಕೂ ಹೆಚ್ಚು ಪ್ರಕರಣಗಳಿವೆ. ಬೆಳಗಿನ ಜಾವ ವಾಯು ವಿಹಾರಕ್ಕೆ ಬಂದಾಗ ಚಾಕುವಿನಿಂದ ಇರಿಯಲಾಗಿದೆ. ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜವಾಗಲಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement