ಪ್ಲೀಸ್ ಪಾಸ್ ಮಾಡಿ, ನನ್ನ ಲವ್ ನಿಮ್ಮ ಕೈಯಲ್ಲಿದೆ : ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ 500 ರೂ. ಇಟ್ಟು ವಿದ್ಯಾರ್ಥಿಯ ವಿಚಿತ್ರ ಮನವಿ…!

ಬೆಳಗಾವಿ : ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ವಿಚಿತ್ರ ಬೇಡಿಕೆಯಿಟ್ಟು ಬರೆದ ಪತ್ರಗಳು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಮೌಲ್ಯಮಾಪನ ಕೇಂದ್ರಗಳಲ್ಲಿ ಪತ್ತೆಯಾಗಿದೆ.
ವಿದ್ಯಾರ್ಥಿಯೊನ್ನ ತನ್ನ ಉತ್ತರ ಪತ್ರಿಕೆಗಳ ಒಳಗೆ ನಗದು ಹಣ ಮತ್ತು ತನ್ನ “ಪ್ರೇಮ”ದ ಬಗ್ಗೆಯೂ ಬರೆದು ತನ್ನನ್ನು ಪಾಸ್‌ ಮಾಡುವಂತೆ ವಿನಂತಿಸಿಕೊಂಡಿದ್ದಾನೆ.
ಬೆಳಗಾವಿ ಜಿಲ್ಲೆಯ ಶಿಕ್ಷಕರು ಮತ್ತು ಮೇಲ್ವಿಚಾರಕರು ಪರೀಕ್ಷೆಯ ಮಧ್ಯದಲ್ಲಿ ಇದನ್ನು ನೋಡಿದ ನಂತರ ದಿಗ್ಭ್ರಮೆಗೊಂಡರು. ವರದಿಗಳ ಪ್ರಕಾರ, ವಿದ್ಯಾರ್ಥಿಯೊಬ್ಬ ತಮ್ಮ ಉತ್ತರಗಳ ನಡುವೆ “ದಯವಿಟ್ಟು ನನ್ನನ್ನು ಪಾಸ್ ಮಾಡಿ” ಎಂಬ ಮನವಿಯೊಂದಿಗೆ 500 ರೂ. ನೋಟನ್ನು ಇಟ್ಟಿದ್ದಾನೆ.

ನನ್ನನ್ನು ಪಾಸ್ ಮಾಡಿದ್ರೆ ಅಷ್ಟೇ ನನ್ನ ಲವ್ (Love) ಮಾಡುತ್ತೇನೆ ಅಂದಿದ್ದಾಳೆ. ದಯವಿಟ್ಟು ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ. ಈ 500 ರೂ. ಹಣದಲ್ಲಿ ಚಹಾ ಕುಡಿರಿ ಸರ್ ಎಂದು ಬರೆದಿದ್ದಾನೆ.
ಮತ್ತೊಂದು ಪತ್ರಿಕೆಯಲ್ಲಿ ಪ್ಲೀಸ್ ಮಿಸ್ ಅಂಡ್ ಸರ್ ನನ್ನನ್ನು ಪಾಸ್ ಮಾಡಿ ಎಂದು ಬರವಣಿಗೆ ಪತ್ತೆ. ನೀವು ಪಾಸ್ ಮಾಡದಿದ್ದರೆ ನನ್ನ ಅಪ್ಪ ಅಮ್ಮ ಮುಂದೆ ಕಾಲೇಜಿಗೆ ಕಳಿಸಲ್ಲ ಎಂದು ಬರೆಯಲಾಗಿತ್ತು. ಇನ್ನೊಂದು ಉತ್ತರ ಪತ್ರಿಕೆಯಲ್ಲಿ ನನ್ನ ಪಾಸ್ ಮಾಡಿದರೆ ನಿಮಗೆ ಹೆಚ್ಚು ಹಣ ಕೊಡುತ್ತೇನೆ ಎಂದು ಬರೆಯಲಾಗಿತ್ತು. ಚಿಕ್ಕೋಡಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಖಂಡಿತವಾಗಿಯೂ ಶೈಕ್ಷಣಿಕ ಜ್ಞಾನದ ಪರೀಕ್ಷೆಗಿಂತ ಹೆಚ್ಚಿನದನ್ನು ಒದಗಿಸಿವೆ.
ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ -2025, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಯನ್ನು ನಡೆದಿತ್ತು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 8.93 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಣೆಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಪ್ರಮುಖ ಸುದ್ದಿ :-   ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಸಹಕಾರ ಸಚಿವ ಕೆ. ಎನ್‌ ರಾಜಣ್ಣ...!

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement