ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ (Karnataka Rains) ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆಯಲ್ಲಿ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ಏಪ್ರಿಲ್‌ 22ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯದಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ.

ಏಪ್ರಿಲ್‌ 23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ. 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ತುಮಕೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement