ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಶಿವಮೊಗ್ಗದ ನಿವಾಸಿ ಸಾವು, ಐವರು ಪ್ರವಾಸಿಗರಿಗೆ ಗಾಯ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಪತ್ನಿ ಮತ್ತು ಮಗ ಅಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ (47) ಅವರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಇವರ ಪತ್ನಿ ಪಲ್ಲವಿ ಮತ್ತು ಮಗ ಅಪಾಯದಿಂದ ಪಾರಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ (47) ಮೃತ ಪಟ್ಟಿದ್ದಾರೆ. ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಕುಟುಂಬಸ್ಥರು ತೆರಳಿದ್ದರು.

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಮಂಗಳವಾರ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಪ್ರವಾಸಿಗ ಮೃತಪಟ್ಟಿದ್ದರೆ, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಗಾಯಾಳುಗಳನ್ನು ಅನಂತ್‌ನಾಗ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ದಾಳಿ ನಡೆದ ಸ್ಥಳವನ್ನು ತಲುಪಲು ಪ್ರಯತ್ನಿಸುತ್ತಿವೆ ಆದರೆ ಕಠಿಣ ಭೂಪ್ರದೇಶದಿಂದಾಗಿ ತೊಂದರೆಗಳನ್ನು ಎದುರಿಸುತ್ತಿವೆ. ಇನ್ನು ಲಷ್ಕರ್-ಎ-ತೈಬಾದ ಒಂದು ಶಾಖೆಯು ಘಟನೆಯ ಹೊಣೆ ಹೊತ್ತಿದೆ ಎಂದು ವರದಿಯಾಗಿದೆ.
ಮಂಗಳವಾರ ಮಧ್ಯಾಹ್ನ 2:30 ರ ಸುಮಾರಿಗೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರ ಗುಂಪು ಪ್ರ

ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ವಾಸಿಗರ ಮೇಲೆ ಗುಂಡು ಹಾರಿಸಿದೆ. ಬೈಸರನ್ ಹುಲ್ಲುಗಾವಲು ಪಹಲ್ಗಾಮ್ ಗಿರಿಧಾಮದಿಂದ ಸುಮಾರು 5 ಕಿ.ಮೀ ದೂರದಲ್ಲಿದೆ ಮತ್ತು ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ಪ್ರವೇಶಿಸಬಹುದು. ದಾಳಿಯ ನಂತರ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿವೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೆ ಘಟನಾ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ. ಭಯೋತ್ಪಾದಕ ದಾಳಿಯ ನಂತರ, ಅಮಿತ್ ಶಾ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement