ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ಭೀಕರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ.
ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಕಟಿಸಿದ್ದಾರೆ.

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕು ಮುನ್ನ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ದಾಳಿ ಸಂಪೂರ್ಣ ಯೋಜಿತವಾಗಿದ್ದು, 28 ಜನರನ್ನು ಬಲಿ ಪಡೆದ ಉಗ್ರರ ಹೇಯಕೃತ್ಯವನ್ನು ಖಂಡಿಸುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪಹಲ್ಗಾಮ್‌ನ ಬೈಸರನ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಶಿವಮೊಗ್ಗದ ಮಂಜುನಾಥ ಮೃತದೇಹವನ್ನು ಜಮ್ಮು ಕಾಶ್ಮೀರದಿಂದ ಬುಧವಾರ ಸಂಜೆ 6 ಗಂಟೆಗೆ ರವಾನಿಸಲಾಗಿದೆ. ಮಧ್ಯರಾತ್ರಿ 1 ಗಂಟೆಗೆ ಬೆಂಗಳೂರು ತಲುಪುವ ನಿರೀಕ್ಷೆಯಿದೆ. ನಂತರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ರಸ್ತೆ ಮಾರ್ಗವಾಗಿ ಮೃತದೇಹವನ್ನು ಕೊಂಡೊಯ್ಯಲು ಯೋಚಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಮುಖ ಸುದ್ದಿ :-   ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement