ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ವಿರುದ್ಧ ಕೋಫೆಪೋಸಾ ಪ್ರಕರಣ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (Ranya Rao) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB) ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA) ಕಾಯ್ದೆಯನ್ನು ಜಾರಿಗೊಳಿಸಿದೆ. ಆರೋಪಿಗಳಾದ ತರುಣ ರಾಜು ಮತ್ತು ಸಾಹಿಲ್ ಸಕಾರಿಯಾ ಜೈನ್ ವಿರುದ್ಧವೂ ಕೋಫೆಪೋಸಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಕಳ್ಳಸಾಗಾಣಿಕೆಯಲ್ಲಿ ತೊಡಗುವುದನ್ನು ತಡೆಯುವ ಸಲುವಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ.

ಪ್ರಕರಣದಲ್ಲಿ ರನ್ಯಾ ರಾವ್ ಮತ್ತು ಇತರರು ಜಾಮೀನು ಪಡೆಯಲು ಪದೇ ಪದೆ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ ಎಂದು ಮೂಲಗಳು ಬಹಿರಂಗಪಡಿಸಿವೆ. ಈ ಕಾಯ್ದೆ ಅನ್ವಯ ಆರೋಪಿಯನ್ನು ಮೂರು ತಿಂಗಳಿಂದ ಒಂದು ವರ್ಷದ ವರೆಗೆ ಜೈಲಿನಲ್ಲಿ ಇರಿಸಬಹುದು. ತೀರ ಗಂಭೀರ ಪ್ರಕರಣವಾದರೆ ಇದನ್ನು ಎರಡು ವರ್ಷದ ವರೆಗೂ ವಿಸ್ತರಿಸಬಹುದು.
12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು. ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್‌ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement