ಪಹಲ್ಗಾಮ್​ ದಾಳಿ: ಪಾಕ್​ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿ ಸಂಬಂಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಯಿಂದ ಪಾಕಿಸ್ತಾನ ಮಾಧ್ಯಮಗಳಲ್ಲೂ ಸುದ್ದಿಯಾಗಿದ್ದಾರೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡುವ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯನವರು ನೀಡಿದ ಹೇಳಿಕೆ ಈಗ ಪಾಕಿಸ್ತಾನ ಮಾಧ್ಯಮಗಳಲ್ಲಿ ಹೈಲೈಟ್‌ ಆಗಿದೆ. ಈ ಹೇಳಿಕೆಯನ್ನು ಪಾಕ್ ಟಿವಿ ಮಾಧ್ಯಮಗಳು ಬ್ರೇಕ್​ ನ್ಯೂಸ್​ ಆಗಿ ಪ್ರಸಾರ ಮಾಡಿವೆ.
ಇದನ್ನು ಪಾಕಿಸ್ತಾನ ಮಾಧ್ಯಮಗಳು ಸುದ್ದಿ ಪ್ರಸಾರ ಮಾಡಿವೆ. ಈ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನ ವಿಪಕ್ಷ ಬಿಜೆಪಿ ನಾಯಕರು ಸಿದ್ದರಾಮಯ್ಯ ಪಾಕಿಸ್ತಾನ ರತ್ನ ಎಂದು ಟೀಕಿಸಿದೆ.

ಶನಿವಾರ ಮೈಸೂರಲ್ಲಿ ಪಹಲ್ಗಾಮ್ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪಹಲ್ಗಾಮ್ ಅದೊಂದು ಯಾತ್ರಾರ್ಥಿಗಳ ಸ್ಥಳ. ಅಲ್ಲಿ ಭದ್ರತೆಯನ್ನು ಕೈಗೊಳ್ಳಬೇಕಿತ್ತು. ಈ ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಭದ್ರತಾ ವೈಫಲ್ಯ ಆಗಿದೆ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದು ಹೇಳಿದ್ದರು.

ಪಾಕಿಸ್ತಾನದ ಜತೆ ಯುದ್ಧ ಮಾಡುವ ಅಗತ್ಯವಿಲ್ಲ ಎಂಬ ಹೇಳಿಕೆಗೆ ಟೀಕೆ ವ್ಯಕ್ತವಾದ ನಂತರ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹಾರಲು ಅನುಮತಿ ಕೇಳಬೇಡಿ'...: ಮೋದಿ ಲೇಖನದ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಟೀಕೆಗಳ ನಂತ್ರ ಶಶಿ ತರೂರ ಮಾರ್ಮಿಕ ಪೋಸ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement