ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು.
“ಚೆನ್ನೈ ವಿಮಾನ ನಿಲ್ದಾಣದಲ್ಲಿ ಭಾರಿ ಜನಸಮೂಹದಿಂದ ಅಜಿತಕುಮಾರ ಅವರ ಕಾಲಿಗೆ ಸಣ್ಣ ಗಾಯವಾಗಿತ್ತು. ಆದ್ದರಿಂದ, ಅವರನ್ನು ಚಿಕಿತ್ಸೆಗಾಗಿ ದಾಖಲಿಸಬೇಕಾಯಿತು. ನಟನನ್ನು ಬುಧವಾರ ಸಂಜೆ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಅವರ ಆರೋಗ್ಯದ ಬಗ್ಗೆ ಚಿಂತಿಸಲು ಏನೂ ಇಲ್ಲ” ಎಂದು ನಟನ ಆಪ್ತ ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ತಂತಿ ಟಿವಿಯಲ್ಲಿ ಬಂದ ವರದಿಯ ಪ್ರಕಾರ, ಚೆನ್ನೈ ವಿಮಾನ ನಿಲ್ದಾಣದಲ್ಲಿ ನಟನ ಆಗಮನಕ್ಕಾಗಿ ಭಾರಿ ಜನಸಮೂಹ ಕಾಯುತ್ತಿತ್ತು. ಭದ್ರತಾ ಸಿಬ್ಬಂದಿಗೆ ಜನಸಂದಣಿಯನ್ನು ನಿರ್ವಹಿಸುವುದು ಕಷ್ಟಕರವಾಗಿತ್ತು, ಇದರಿಂದಾಗಿ ನಟನನನ್ನು ಸಮೀಪದಿಂದ ನೋಡಲು ಜನರ ಗುಂಪು ಮುಗಿಬಿದ್ದ ಕಾರಣ ಈ ವೇಳೆ ನೂಕು ನುಗ್ಗಲು ಉಂಟಾಗಿ ಅಜಿತ್ ಅವರ ಕಾಲಿಗೆ ಪೆಟ್ಟಾಯಿತು.
ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ನಟ ಅಜಿತ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು. ನಟನ ಪತ್ನಿ ಶಾಲಿನಿ ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಜನವರಿಯಲ್ಲಿ ಅವರಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ಘೋಷಿಸಿದಾಗ, ಅಜಿತ ಹೇಳಿಕೆ ಬಿಡುಗಡೆ ಮಾಡಿ, “ಭಾರತದ ರಾಷ್ಟ್ರಪತಿಗಳಿಂದ ಗೌರವಾನ್ವಿತ ಪದ್ಮ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷ ಮತ್ತು ಗೌರವವಿದೆ. ಈ ಪ್ರತಿಷ್ಠಿತ ಗೌರವಕ್ಕಾಗಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಇಂತಹ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಒಂದು ಸೌಭಾಗ್ಯ ಮತ್ತು ನಮ್ಮ ರಾಷ್ಟ್ರಕ್ಕೆ ನನ್ನ ಕೊಡುಗೆಗಳನ್ನು ಉದಾರವಾಗಿ ಗುರುತಿಸಿದ್ದಕ್ಕಾಗಿ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಎಂದು ಅವರು ತಿಳಿಸಿದ್ದರು.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement