ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಹೆಚ್ಚಳ ; ಮತ್ತೆ ರಾಜ್ಯದ ಅತೀ ಶ್ರೀಮಂತ ದೇಗುಲದ ಪಟ್ಟ

ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ … Continued

ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued

50 ಕೋಟಿ ರೂ. ನಾಯಿ ಖರೀದಿಸಿದ್ದೇನೆ ಎಂದವನ ಮನೆ ಮೇಲೆ ಇ.ಡಿ. ದಾಳಿ ; ಆದ್ರೆ ನಿಜ ಗೊತ್ತಾಗಿ ಶಾಕ್‌…!

ಬೆಂಗಳೂರು : 50 ಕೋಟಿ ರೂ. ಮೌಲ್ಯದ ಅಪರೂಪದ “ತೋಳ ನಾಯಿ”ಯನ್ನು ಆಮದು ಮಾಡಿಕೊಂಡಿರುವುದಾಗಿ ಹೇಳಿಕೊಂಡ ಬೆಂಗಳೂರಿನ ವ್ಯಕ್ತಿಯೊಬ್ಬರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ED) ಗುರುವಾರ ಶೋಧ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾದ ಆ ವ್ಯಕ್ತಿಯ ಹೇಳಿಕೆಯ ನಂತರ, ಇ.ಡಿ. ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (FEMA) ಸಂಭಾವ್ಯ ಉಲ್ಲಂಘನೆಗಳ ಬಗ್ಗೆ ತನಿಖೆ … Continued

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ್ದಕ್ಕೆ ಬ್ರಾಹ್ಮಣ ಮಹಾಸಭಾ ಆಕ್ಷೇಪ

ಶಿವಮೊಗ್ಗ : ಏಪ್ರಿಲ್ 16 ರಂದು ಆದಿಚುಂಚನಗಿರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಕೇಂದ್ರಕ್ಕೆ ಪ್ರವೇಶಿಸುವಾಗ ವಿದ್ಯಾರ್ಥಿಗಳು ಧರಿಸಿದ್ದ ‘ಜನಿವಾರ’ವನ್ನು ಭದ್ರತಾ ಸಿಬ್ಬಂದಿ ಬಲವಂತವಾಗಿ ಹೊರತೆಗೆಸಿದ್ದಾರೆ ಎಂದು ಅಖಿಲ ಭಾರತ ಬ್ರಾಹ್ಮಣ ಸಭಾ ಹಾಗೂ ವಿವಿಧ ಬ್ರಾಹ್ಮಣ ಸಂಘಗಳು ಆರೋಪಿಸಿವೆ. ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ ನೇತೃತ್ವದ ಬ್ರಾಹ್ಮಣ ಸಮುದಾಯದ ನಿಯೋಗವು ಗುರುವಾರ … Continued

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

ವೀಡಿಯೊ | ವಕ್ಫ್ ತಿದ್ದುಪಡಿ ಕಾಯ್ದೆ ; ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ದಾವೂದಿ ಬೊಹ್ರಾ ಮುಸ್ಲಿಂ ನಾಯಕರು

ನವದೆಹಲಿ: ದಾವೂದಿ ಬೊಹ್ರಾ ಮುಸ್ಲಿಂ ಸಮುದಾಯದ ನಿಯೋಗ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಯಿತು, ವಕ್ಫ್ (ತಿದ್ದುಪಡಿ) ಕಾಯ್ದೆ-2025 ಅಂಗೀಕಾರವಾಗಿದ್ದಕ್ಕೆ ನಿಯೋಗದ ಸದಸ್ಯರು ಪ್ರಧಾನಿಗೆ ಧನ್ಯವಾದ ಅರ್ಪಿಸಿದರು. ವಕ್ಫ್‌ ತಿದ್ದುಪಡಿಯು ಸಮುದಾಯದ ಬಹುಕಾಲದ ಬೇಡಿಕೆಯಾಗಿರುವುದರಿಂದ ಈ ಸಭೆ ಮಹತ್ವದ್ದಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ನಡೆದ ಸಂವಾದದ ಸಂದರ್ಭದಲ್ಲಿ, ದಾವೂದಿ ಬೋಹ್ರಾ ಸಮುದಾಯದ … Continued

ಮುಂದಿನ ವಿಚಾರಣೆಗೆ ವಕ್ಫ್ ಮಂಡಳಿಗೆ ಮುಸ್ಲಿಮೇತರರ ನೇಮಕವಿಲ್ಲ, ಆಸ್ತಿ ಡಿನೋಟಿಫೈ ಮಾಡಲ್ಲ: ಸುಪ್ರೀಂ ಕೋರ್ಟ್‌ಗೆ ಕೇಂದ್ರದ ಭರವಸೆ

ನವದೆಹಲಿ: ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರ ನೇಮಕ ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿ-ನೋಟಿಫೈ ಮಾಡುವ ನಿಬಂಧನೆ ಸೇರಿದಂತೆ ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯಿದೆ, 2025ರ ಕೆಲವು ಸೆಕ್ಷನ್‌ಗಳ ಅಡಿ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಈ … Continued

ವೀಡಿಯೊ…| 10 ಸಲ ಕಚ್ಚಿದ ವಿಷಕಾರಿ ಹಾವು ಶವದ ಪಕ್ಕದಲ್ಲೇ ಬೆಳಗಿನ ತನಕ ಮಲಗಿತ್ತು ; ಆದ್ರೆ ಕತ್ತುಹಿಸುಕಿ ಕೊಲೆಯಾಗಿದ್ದು ಬಯಲಾಯ್ತು..!

ಮೀರತ್ : ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಆಘಾತಕಾರಿ ಹಾಗೂ ನಂಬಲಸಾಧ್ಯವಾದ ಘಟನೆಯೊಂದರಲ್ಲಿ ಯಾರೂ ಊಹಿಸದ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಘಟನೆಯಲ್ಲಿ ವಿಷಕಾರಿ ಹಾವೊಂದು ಹತ್ತು ಬಾರಿ ಕಚ್ಚಿ 25 ವರ್ಷದ ವ್ಯಕ್ತಿಯೊಬ್ಬನನ್ನು ಸಾಯಿಸಿದೆ ಎಂದು ನಂಬಲಾಗಿತ್ತು. ಆದರೆ ವಿಷಕಾರಿ ಹಾವು ಕಚ್ಚಿದ್ದು, ಹೌದು ಆದರೆ ದಿಗ್ಭ್ರಮೆಗೊಳಿಸಿದ ಸಂಗತಿಯೆಂದರೆ ಆ ವ್ಯಕ್ತಿಯನ್ನು … Continued

ವಿವಾದಾತ್ಮಕ ಇಫ್ತಾರ್ ಕೂಟ ; ತಮಿಳು ಸೂಪರ್‌ ಸ್ಟಾರ್‌ ದಳಪತಿ ವಿಜಯ ವಿರುದ್ಧ ಮೌಲಾನಾ ಶಹಾಬುದ್ದೀನ್ ರಜ್ವಿ ಫತ್ವಾ

ನವದೆಹಲಿ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಮತ್ತು ಖ್ಯಾತ ತಮಿಳು ನಟ ವಿಜಯ ದಳಪತಿ ಅವರು ಆಯೋಜಿಸಿದ್ದ ಇಫ್ತಾರ್ ಕೂಟಕ್ಕೆ ಮದ್ಯವ್ಯಸನಿಗಳು ಮತ್ತು ಜೂಜುಕೋರರು ಸೇರಿದಂತೆ ಸಮಾಜ ವಿರೋಧಿ ಅಂಶಗಳನ್ನು ಆಹ್ವಾನಿಸಿದ್ದಾರೆ ಎಂಬ ಆರೋಪದ ಮೇಲೆ ಅವರ ವಿರುದ್ಧ ಫತ್ವಾ ಹೊರಡಿಸಲಾಗಿದೆ. ಉತ್ತರ ಪ್ರದೇಶದ ಬರೇಲಿಯ ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ … Continued

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಕರ್ನಾಟಕದ ರಾಜ್ಯಪಾಲ

ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ (Muslim reservation) ನೀಡುವ ರಾಜ್ಯದ ವಿಧೇಯಕವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಿದ್ದಾರೆ. ಈ ವಿಧೇಯಕ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಹೋಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗೆ ಕಳುಹಿಸಿದ್ದಾರೆ. “ಸಂವಿಧಾನವು ಧರ್ಮದ ಆಧಾರದ ಮೇಲೆ … Continued