ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು, ಚಿಪ್‌ಗಳಿಗೆ ಪ್ರತಿಸುಂಕಗಳಿಂದ ವಿನಾಯಿತಿ ಘೋಷಿಸಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಡೊನಾಲ್ಡ್ ಟ್ರಂಪ್ ಸರ್ಕಾರವು ಸ್ಮಾರ್ಟ್‌ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಸೆಮಿಕಂಡಕ್ಟರ್ ಚಿಪ್‌ಗಳು ಸೇರಿದಂತೆ ಹಲವಾರು ಎಲೆಕ್ಟ್ರಾನಿಕ್ ಉತ್ಪನ್ನಗಳಿಗೆ ಪ್ರತಿ ಸುಂಕಗಳಿಂದ ವಿನಾಯಿತಿ ನೀಡುವುದಾಗಿ ಘೋಷಿಸಿದೆ. ಇದರಲ್ಲಿ ಚೀನಾದ ಎಲೆಕ್ಟ್ರಾನಿಕ್‌ ಉತ್ಪನ್ನಗಳು ಸೇರಿವೆ. ಈ ಉತ್ಪನ್ನಗಳು ಚೀನಾದ ಮೇಲೆ ವಿಧಿಸಲಾಗುವ ಪ್ರಸ್ತುತ ಶೇಕಡಾ 145 ಸುಂಕಗಳಿಗೆ ಅಥವಾ ಬೇರೆಡೆ ವಿಧಿಸಲಾಗುವ ಶೇಕಡಾ 10 ರಷ್ಟು … Continued

ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು..?

ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ … Continued

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಮಸೂದೆ ವಿರೋಧಿ ಪ್ರತಿಭಟನೆ ವೇಳೆ 3 ಸಾವು ; ಕೇಂದ್ರ ಪಡೆಗಳ ನಿಯೋಜನೆಗೆ ಕೋರ್ಟ್‌ ಆದೇಶ

ಕೋಲ್ಕತ್ತಾ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘಟನೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಮೃತರಲ್ಲಿ ಇಬ್ಬರು ಘರ್ಷಣೆಯಲ್ಲಿ ಸಾವಿಗೀಡಾಗಿದ್ದರೆ, ಒಬ್ಬರು ಗುಂಡಿನ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಸಂಬಂಧಿಸಿದ ಆಸ್ತಿಗಳ ಮುಟ್ಟುಗೋಲಿಗೆ ಮುಂದಾದ ಇ.ಡಿ.

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ವಶಕ್ಕೆ ಪಡೆಯಲು ಜಾರಿ ನಿರ್ದೇಶನಾಲಯ (ED) ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಕಾಂಗ್ರೆಸ್ ನಿಯಂತ್ರಿತ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ವಿರುದ್ಧದ ಹಣ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ಜಪ್ತಿ ಮಾಡಿದ್ದ ₹661 ಕೋಟಿ ಮೌಲ್ಯದ ಸ್ಥಿರ … Continued

ವೀಡಿಯೊ…| ಗೆಳತಿಯನ್ನು ಸೂಟ್‌ಕೇಸ್‌ನಲ್ಲಿ ಬಚ್ಚಿಟ್ಟು ಬಾಲಕರ ಹಾಸ್ಟೆಲಿಗೆ ತಂದು ಸಿಕ್ಕಿಬಿದ್ದ ಯುವಕ..!

ಸಿನೆಮಾದಲ್ಲಿ ನಡೆಯುವಂತೆ ನಡೆದ ವಿಚಿತ್ರ ಘಟನೆಯೊಂದರಲ್ಲಿ, ಹರಿಯಾಣದ ಸೋನಿಪತ್‌ನ ಒ.ಪಿ. ಜಿಂದಾಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ಆತನ ಗರ್ಲ್‌ ಫ್ರೆಂಡ್‌ ಎಂದು ನಂಬಲಾದ ಹುಡುಗಿಯನ್ನು ಸೂಟ್‌ಕೇಸ್‌ನೊಳಗೆ ಬಚ್ಚಿಟ್ಟು ಬಾಲಕರ ಹಾಸ್ಟೆಲ್‌ಗೆ ನುಸುಳಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದ ಘಟನೆ ನಡೆದಿದೆ. ಇದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ. ವೀಡಿಯೊದಲ್ಲಿ, ಭದ್ರತಾ ಸಿಬ್ಬಂದಿ ದೊಡ್ಡ ಸೂಟ್‌ಕೇಸ್ ಅನ್ನು ಬಿಚ್ಚುತ್ತಿರುವಾಗ, ಒಳಗೆ … Continued

ಅಪರೂಪದ 11 ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್‌ ; ಒಂದು ಹಲ್ಲಿಗೆ 60 ಲಕ್ಷ ರೂ.ಗಳಂತೆ ಮಾರಾಟಕ್ಕೆ ಯತ್ನ..!

ಗುವಾಹತಿ : ಅಸ್ಸಾಂನ ದಿಬ್ರುಗಢದಲ್ಲಿ ಪೊಲೀಸರು ಶುಕ್ರವಾರ 11 ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು ವಶಪಡಿಸಿಕೊಂಡಿದ್ದು, ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಟೋಕೆ ಗೆಕ್ಕೊಗಳನ್ನು ಹೆಚ್ಚು ಅಳಿವಿನಂಚಿನಲ್ಲಿವ ಜೀವಿಗಳೆಂದು ಪಟ್ಟಿ ಮಾಡಲಾಗಿರುವುದರಿಂದ ಅವುಗಳ ರಫ್ತು ನಿಷೇಧಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ … Continued

ದೇಶಾದ್ಯಂತ ಯುಪಿಐ (UPI) ಸೇವೆಯಲ್ಲಿ ವ್ಯತ್ಯಯ : ಹಣ ವಹಿವಾಟಿಗೆ ಬಳಕೆದಾರರ ಪರದಾಟ…!

ಭಾರತದಾದ್ಯಂತ ಏಕೀಕೃತ ಪಾವತಿ ಇಂಟರ್ಫೇಸ್ (UPI) ಸೇವೆಗಳಿಗೆ ತೊಂದರೆಯಾಗಿದ್ದು, ಬಳಕೆದಾರರು ಡಿಜಿಟಲ್ ವಹಿವಾಟುಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಯುಪಿಐ (UPI) ಕಾರ್ಯಾಚರಣೆಗಳನ್ನು ನೋಡಿಕೊಳ್ಳುವ ನ್ಯಾಶನಲ್‌ ಪೇಮೆಂಟ್ಸ್‌ ಕಾರ್ಪೋರೇಶನ್‌ ಆಫ್‌ ಇಂಡಿಯಾ ಇನ್ನೂ ಸಮಸ್ಯೆ ಬಗ್ಗೆ ಏನನ್ನು ಹೇಳದಿದ್ದರೂ ಬಳಕೆದಾರರು ಹಣವನ್ನು ವರ್ಗಾಯಿಸಲು ಅಥವಾ ಅವರ ಖಾತೆಯ ಬ್ಯಾಲೆನ್ಸ್ ಅನ್ನು ಪರಿಶೀಲಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳುತ್ತಿದ್ದಾರೆ. … Continued

16 ವರ್ಷದೊಳಗಿನ ಮಕ್ಕಳಿಗಾಗಿ ಇನ್​ಸ್ಟಾಗ್ರಾಂ​ನಲ್ಲಿ ಹೊಸ ನಿಯಮ….

ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಇನ್ನು ಮುಂದೆ 16 ವರ್ಷದೊಳಗಿನ ಮಕ್ಕಳಿಗೆ ಲೈವ್ ಮಾಡಲು ಇದರಲ್ಲಿ ಅವಕಾಶ ಇರುವುದಿಲ್ಲ. ಮೆಟಾ ಶೀಘ್ರದಲ್ಲೇ 16 ವರ್ಷದೊಳಗಿನ ಮಕ್ಕಳು ಇನ್‌ಸ್ಟಾಗ್ರಾಮ್‌(Instagram)ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವುದನ್ನು ತಡೆಯಲಿದೆ. ಇದಕ್ಕೆ ಅವರ ತಂದೆ-ತಾಯಿಗಳು ಅನುಮತಿ ಬೇಕಾಗುತ್ತದೆ. ಹೊಸ ಸುರಕ್ಷತಾ ನಿಯಮವು ಆನ್‌ಲೈನ್‌ನಲ್ಲಿ 16 ವರ್ಷದೊಳಗಿನ ಬಳಕೆದಾರರಿಗೆ ಸುರಕ್ಷತಾ ಕ್ರಮಗಳನ್ನು … Continued

ಜಗತ್ತಿನಲ್ಲಿ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (AI) ಸಹಾಯದಿಂದ ಮಗು ಜನನ…! ಇದು ಬಂಜೆತನಕ್ಕೆ ಪರಿಹಾರ?

ವಿಶ್ವದಲ್ಲೇ ಇದೇ ಮೊದಲ ಬಾರಿಗೆ ಸಂಪೂರ್ಣ ಸ್ವಯಂಚಾಲಿತ ಐವಿಎಫ್‌ (IVF) ಸಿಸ್ಟಂ ಮತ್ತು ಕೃತಕ ಬುದ್ಧಿಮತ್ತೆ (AI) ಸಹಾಯದಿಂದ ಮಗು ಜನಿಸಿದೆ. ಫಲೀಕರಣಕ್ಕೆ ಸಹಾಯ ಮಾಡಲು ಕೃತಕ ಬುದ್ಧಿಮತ್ತೆ (AI) ಸಹಾಯದಿಂದ ಸಂಪೂರ್ಣ ಸ್ವಯಂಚಾಲಿತ ಐವಿಎಫ್‌ (IVF) ಸಿಸ್ಟಂ ಅನ್ನು ಬಳಸಿಕೊಳ್ಳಲಾಗಿದೆ. ಈ ಬೆಳವಣಿಗೆಯು ಫಲವತ್ತತೆ ಚಿಕಿತ್ಸೆಗಳಲ್ಲಿ ಪ್ರಮುಖ ಬದಲಾವಣೆಯನ್ನು ಸೂಚಿಸಬಹುದು. ನ್ಯೂಯಾರ್ಕ್ ಮೂಲದ ಬಯೋಟೆಕ್ … Continued

ಶವದ ಮೇಲಿನ ಮೂಗುತಿಯಿಂದ ಬಯಲಾಯ್ತು ಮಹಿಳೆಯ ಕೊಲೆಯ ರಹಸ್ಯ

ನವದೆಹಲಿ: ಶವದ ಮೇಲಿನ ಮೂಗುತಿ ನೀಡಿದ ಸುಳಿವಿನಿಂದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಮೂಗುತಿಯ ಸಹಾಯದಿಂದ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆಯ ಕೊಲೆಗಾರನನ್ನು ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಪತಿಯೇ ತನ್ನ ಹೆಂಡತಿಯನ್ನು ಕೇಬಲ್ ವೈರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಆಕೆಯ ದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಚರಂಡಿಗೆ ಎಸೆದಿದ್ದ ಎಂದು ಪೊಲೀಸರು ಶುಕ್ರವಾರ … Continued