ವೀಡಿಯೊ…| ಅಹಮದಾಬಾದಿನಲ್ಲಿ ಬಿಸಿಲಿನ ತಾಪಕ್ಕೆ ಎಚ್ಚರತಪ್ಪಿ ಬಿದ್ದ ಕಾಂಗ್ರೆಸ್ ನಾಯಕ ಪಿ ಚಿದಂಬರಂ ; ಆಸ್ಪತ್ರೆಗೆ ದಾಖಲು

ಅಹಮದಾಬಾದ್‌ : ಮಂಗಳವಾರ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಭಾಗವಹಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಬಿಸಿಲಿನ ತಾಪದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಐತಿಹಾಸಿಕ ಸಬರಮತಿ ಆಶ್ರಮದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ … Continued

ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಡಾ. ಬಾಳಿಗಾ ವಾಣಿಜ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಫಲಿತಾಂಶ ಪ್ರಕಟಿತವಾಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ನವ್ಯಾ ಹೆಬ್ಬಾರ ಶೇ. 97.33% ಅಂಕ ಮತ್ತು ಅನನ್ಯ ಭಟ್ಟ (97.33%)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಣತಿ ಭಟ್ಟ ಶೇ. 95.33% ಹಾಗೂ … Continued

ಮಸೂದೆಗಳನ್ನು ತಡೆಹಿಡಿಯಲು ರಾಜ್ಯಪಾಲರಿಗೆ ವಿಟೋ ಅಧಿಕಾರವಿಲ್ಲ : ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್‌ ತರಾಟೆ

ಬೆಂಗಳೂರು : ರಾಜ್ಯ ಶಾಸಕಾಂಗ ಕಳುಹಿಸುವ ಮಸೂದೆಗಳನ್ನು ತಡೆಹಿಡಿದು ಕೂಡ್ರಲು ಇರುವುದಕ್ಕೆ ರಾಜ್ಯಪಾಲರಿಗೆ ಯಾವುದೇ ರೀತಿಯ ವಿಟೋ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ. ತಮಿಳುನಾಡು ಶಾಸಕಾಂಗವು ಮಂಡಿಸಿದ 10 ಮಸೂದೆಗಳಿಗೆ ಸಂಬಂಧಿಸಿದಂತೆ ರಾಜ್ಯಪಾಲ ಆರ್.ಎನ್. ರವಿ ಅವರ ನಿರ್ಧಾರಗಳು ಕಾನೂನುಬಾಹಿರ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠ ಹೇಳಿತು. … Continued

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ ಗೌಡ ನಿವಾಸದ ಮೇಲೆ ಇ.ಡಿ. ದಾಳಿ

ಶಿವಮೊಗ್ಗ/ಬೆಂಗಳೂರು : ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (DCC Bank Shivamogga) ಮೇಲೆ ಜಾರಿ ನಿರ್ದೇಶನಾಲಯ (ED0 ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ ನಿವಾಸ ಸೇರಿದಂತೆ ಬೆಂಗಳೂರು ಸೇರಿದಂತೆ 8 ಕಡೆ ಇಡಿ ದಾಳಿ ನಡೆಸಿದೆ. ಬ್ಯಾಂಕ್‌ಗೆ ನಕಲಿ ಚಿನ್ನ ಅಡವಿಟ್ಟು 62 ಕೋಟಿ ಸಾಲ … Continued

ದ್ವಿತೀಯ ಪಿಯುಸಿ ಫಲಿತಾಂಶ : ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ಟಾಪರ್ಸ್‌

ಬೆಂಗಳೂರು : ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25 ನೇ ಸಾಲಿನ ಫಲಿತಾಂಶ ಪ್ರಕಟಿಸಲಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಒಟ್ಟಾರೆ ಶೇ 73.45 ರಷ್ಟು ಫಲಿತಾಂಶ ಬಂದಿದೆ. ಉಡುಪಿ ಜಿಲ್ಲೆ (Udupi) ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದರೆ ಉತ್ತರ ಕರ್ನಾಟಕ ಭಾಗದ … Continued

ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಉಡುಪಿ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ ; ಜಿಲ್ಲಾವಾರು ಫಲಿತಾಂಶದ ಮಾಹಿತಿ ಇಲ್ಲಿದೆ…

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ (2nd PUC Result)ವನ್ನು ಪ್ರಕಟಿಸಿದೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,37,805 ವಿದ್ಯಾರ್ಥಿಗಳು ಬರೆದಿದ್ದರು. 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ … Continued

7000 ಐಷಾರಾಮಿ ಕಾರುಗಳು, ಚಿನ್ನದ ಲೇಪಿತ ಜೆಟ್, 1700 ಕೊಠಡಿಗಳ ಅರಮನೆ, 1 ಬಾರಿ ಕ್ಷೌರಕ್ಕೆ 17 ಲಕ್ಷ ರೂ. ಖರ್ಚು : ಇವರು ಯಾರು ಗೊತ್ತೆ ?

ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ತಮ್ಮ ರಾಜಮನೆತನದ ಜೀವನಶೈಲಿ ಮತ್ತು $50 ಶತಕೋಟಿ ಮೌಲ್ಯದ ಸಂಪತ್ತಿಗೆ ವಿಶ್ವಪ್ರಸಿದ್ಧರಾಗಿದ್ದಾರೆ. ಅವರು 7,000 ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಸಂಗ್ರಹವನ್ನು ಹೊಂದಿದ್ದಾರೆ ಮತ್ತು ಭೂಮಿಯ ಮೇಲಿನ ಅತ್ಯಂತ ಶ್ರೀಮಂತ ರಾಜಮನೆತನಗಳಲ್ಲಿ ಒಬ್ಬರಾಗಿದ್ದಾರೆ. ಬ್ರೂನಿ ಸುಲ್ತಾನನ ವಿಸ್ತೃತ ಹೆಸರು ಹಸ್ಸನಲ್ ಬೊಲ್ಕಿಯಾ ಇಬ್ನಿ ಒಮರ್ ಅಲಿ ಸೈಫುದ್ದಿಯೆನ್ III ಮತ್ತು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 13ರ ವರೆಗೆ ಮಳೆ; ತಮಿಳುನಾಡು, ಕೇರಳಕ್ಕೂ ಮಳೆ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏ.8ರಂದು ಬಿರುಗಾಳಿ ಸಹಿತ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, … Continued

26/11 ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲು ತಡೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಅಮೆರಿಕ ಸುಪ್ರೀಂ ಕೋರ್ಟ್

ವಾಷಿಂಗ್ಟನ್‌ : 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಆತನನ್ನು ಭಾರತಕ್ಕೆ ಹಸ್ತಾಂತರಿಸುವುದು ಈಗ ಮತ್ತಷ್ಟು ಸುಲಭವಾಗಿದೆ. ಮುಂಬೈನ ಹೋಟೆಲ್‌ಗಳು, ರೈಲು ನಿಲ್ದಾಣ ಮತ್ತು ಯಹೂದಿ ಕೇಂದ್ರದ ಮೇಲೆ ಮೂರು ದಿನಗಳ ಕಾಲ … Continued

ಅಮೆರಿಕದ ರಫ್ತಿನ ಮೇಲೆ ಪ್ರತಿಸುಂಕ ವಿಧಿಸಿದ ಚೀನಾಕ್ಕೆ 50%ರಷ್ಟು ಸುಂಕ ವಿಧಿಸುವ ಬೆದರಿಕೆ ಹಾಕಿದ ಟ್ರಂಪ್‌ ; ಒಂದು ದಿನದ ಗಡುವು

ವಾಷಿಂಗ್ಟನ್‌ : ಚೀನಾದ ಆಮದುಗಳ ಮೇಲಿನ ಶೇ. 34 ರಷ್ಟು ಸುಂಕ ವಿಧಿಸಿದ್ದಕ್ಕೆ ಪ್ರತಿಯಾಗಿ ಚೀನಾ ಪ್ರತಿಸುಂಕ ವಿಧಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾಕ್ಕೆ ಶೇ. 50 ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಸೋಮವಾರ ಚೀನಾಕ್ಕೆ ಬೆದರಿಕೆ ಹಾಕಿದ್ದಾರೆ. ಇದಲ್ಲದೆ, ಅಮೆರಿಕದ ಆಮದುಗಳ ಮೇಲಿನ ಶೇ. 34 ರಷ್ಟು ಪರಸ್ಪರ ಸುಂಕ ವಿಧಿಸುವ ಘೋಷಣೆಯನ್ನು … Continued