ಹಕ್ಕುಸ್ವಾಮ್ಯ ಪ್ರಕರಣ; ಎ.ಆರ್. ರೆಹಮಾನ್, ‘ಪೊನ್ನಿಯಿನ್ ಸೆಲ್ವನ್ 2’ ನಿರ್ಮಾಪಕರಿಗೆ 2 ಕೋಟಿ ರೂ. ಠೇವಣಿ ಇಡಲು ದೆಹಲಿ ಹೈಕೋರ್ಟ್ ನಿರ್ದೇಶನ

ನವದೆಹಲಿ: ಜೂನಿಯರ್ ಡಾಗರ್ ಸಹೋದರರ ‘ಶಿವ ಸ್ತುತಿ’ ಗೀತೆಯ ಶಾಸ್ತ್ರೀಯ ನಿರೂಪಣೆಯ ಹಕ್ಕುಸ್ವಾಮ್ಯವನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮೊಕದ್ದಮೆ ಹೂಡಿರುವ ಹಿನ್ನೆಲೆಯಲ್ಲಿ, ದೆಹಲಿ ಹೈಕೋರ್ಟ್ ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಮತ್ತು ‘ಪೊನ್ನಿಯಿನ್ ಸೆಲ್ವನ್ 2’ ಚಿತ್ರದ ನಿರ್ಮಾಪಕರಿಗೆ ನ್ಯಾಯಾಲಯದಲ್ಲಿ 2 ಕೋಟಿ ರೂ. ಠೇವಣಿ ಇಡುವಂತೆ ನಿರ್ದೇಶಿಸಿದೆ. ಏಪ್ರಿಲ್ 25 ರಂದು ಹೊರಡಿಸಿದ … Continued

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆರೋಪಿತ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್ ಶನಿವಾರ ಆದೇಶಿಸಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ … Continued

ವೀಡಿಯೊ…| ಅಯ್ಯೋ ರಾಮಾ…ಮೊಬೈಲ್‌ ಫೋನ್​ ಕಸಿದುಕೊಂಡ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ…!

ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ವಿಜಯನಗರದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ವೀಡಿಯೊದಲ್ಲಿ ವಿದ್ಯಾರ್ಥಿನಿ ತನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡ ಕಾರಣಕ್ಕೆ ಶಿಕ್ಷಕಿಯೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ಕೋಪಗೊಂಡ ವಿದ್ಯಾರ್ಥಿನಿ ಶಿಕ್ಷಕಿಯ ಮೇಲೆ ಕೂಗಾಡುವುದನ್ನು ಮತ್ತು ನಂತರ … Continued

ಪಹಲ್ಗಾಮ್ ದಾಳಿ | ಪಾಕ್‌ ಹುಡುಗಿ ಜತೆ ನಡೆಯಬೇಕಿದ್ದ ವಿವಾಹಕ್ಕೆ ಭಾರತದ ವರನಿಗೆ ಗಡಿಯಲ್ಲಿ ನೋ ಎಂಟ್ರಿ ; ದಿಬ್ಬಣ ವಾಪಸ್‌..

ನವದೆಹಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಭಾರತ-ಪಾಕಿಸ್ತಾನ ಸಂಬಂಧಗಳನ್ನು ಹದಗೆಟ್ಟ ನಂತರ, ಭಾರತ- ಪಾಕಿಸ್ತಾನದ ವಧು-ವರರ ನಡುವೆ ನಡೆಯಬೇಕಿದ್ದ ಮದುವೆಯೊಂದು ಸ್ಥಗಿತಗೊಂಡಿದೆ. ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕುಟುಂಬವೊಂದರ ವರ ಪಾಕಿಸ್ತಾನದ ಯುವತಿಯ ಜೊತೆ ಮದುವೆ ನಿಶ್ಚಯವಾಗಿತ್ತು. ಏಪ್ರಿಲ್ 30 ರಂದು ನಿಗದಿಯಾಗಿದ್ದ ವಿವಾಹದ ಕಾರ್ಯಕ್ರಮಕ್ಕೆ ದಿಬ್ಬಣದೊಂದಿಗೆ ಗುರುವಾರ ವಾಘಾ-ಅಟ್ಟಾರಿ ಗಡಿಯನ್ನು … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ವಿರುದ್ಧ ಕೋಫೆಪೋಸಾ ಪ್ರಕರಣ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ (Ranya Rao) ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ … Continued

ಬಲೂಚಿಸ್ತಾನದಲ್ಲಿ ಐಇಡಿ ಸ್ಫೋಟ: 10 ಪಾಕಿಸ್ತಾನಿ ಅರೆಸೈನಿಕ ಸಿಬ್ಬಂದಿ ಸಾವು

ಪಶ್ಚಿಮ ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ರಿಮೋಟ್ ಕಂಟ್ರೋಲ್ಡ್ ಐಇಡಿ ದಾಳಿಯಲ್ಲಿ ವಾಹನ ಸ್ಫೋಟಗೊಂಡು ಪಾಕಿಸ್ತಾನದ ಹತ್ತು ಅರೆಸೈನಿಕ ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಶುಕ್ರವಾರ ತಿಳಿಸಿದೆ. ಸುದ್ದಿ ಸಂಸ್ಥೆ ಎಎಫ್‌ಪಿ ಪ್ರಕಾರ, ಕ್ವೆಟ್ಟಾದಿಂದ ಸುಮಾರು 30 ಕಿಮೀ (19 ಮೈಲುಗಳು) ದೂರದಲ್ಲಿರುವ ಮಾರ್ಗತ್ ಚೌಕಿಯಲ್ಲಿ ಭದ್ರತಾ ವಾಹನವು ರಸ್ತೆಬದಿಯ … Continued

ಬಡ್ತಿ ಕೋರಿಕೆ: ಎರಡು ತಿಂಗಳಲ್ಲಿ ಐಪಿಎಸ್‌ ಅಧಿಕಾರಿ ರೂಪಾ ಮನವಿ ಪರಿಗಣಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿ ನೀಡುವ ಸಂಬಂಧ ಹೊಸದಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಹಿರಿಯ ಪೊಲೀಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದ್ದು, ಎರಡು ತಿಂಗಳಲ್ಲಿ ಮೌದ್ಗಿಲ್‌ ಮನವಿಯನ್ನು ಕಾನೂನಿನ ಅನ್ವಯ ಪರಿಗಣಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶುಕ್ರವಾರ ನಿರ್ದೇಶಿಸಿದೆ. ಐಎಎಸ್‌ ಅಧಿಕಾರಿ ರೋಹಿಣಿ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ, ಸೋನಿಯಾಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಕಾರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತಿತರರಿಗೆ ಸದ್ಯಕ್ಕೆ ನೋಟಿಸ್ ನೀಡಲು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ. ಹೆಚ್ಚಿನ ದಾಖಲೆಗಳನ್ನು ಸಲ್ಲಿಸಿ ದೋಷಗಳನ್ನು ಸರಿಪಡಿಸುವಂತೆ ಭ್ರಷ್ಟಾಚಾರ ಕಾಯಿದೆಯಡಿ ರೂಪುಗೊಂಡಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ ಗೋಗ್ನೆ ಅವರು ಜಾರಿ ನಿರ್ದೇಶನಾಲಯಕ್ಕೆ (ಇ … Continued

ಪಹಲ್ಗಾಮ್‌ ದಾಳಿ: ತಮ್ಮ ಪ್ರಾಣ ಪಣಕ್ಕಿಟ್ಟು ಭಯೋತ್ಪಾದಕರಿಂದ ಪ್ರವಾಸಿಗರನ್ನು ಕಾಪಾಡಿದ ಕುದರೆ ಸವಾರಿ ನಿರ್ವಾಹಕರು, ಸ್ಥಳೀಯರು…

ನವದೆಹಲಿ: ನವದೆಹಲಿ: ತನ್ನ ತಾಯ್ನಾಡಿಗೆ ಭೇಟಿ ನೀಡುವವರನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಪೋನಿವಾಲಾ (ಕುದುರೆ ರೈಡರ್), 11 ಜನರ ಕುಟುಂಬವನ್ನು ರಕ್ಷಿಸಿದ ಟೂರಿಸ್ಟ್‌ ಗೈಡ್‌, ಅಸಂಖ್ಯಾತ ಸ್ಥಳೀಯರು ಮಂಗಳವಾರ ಮಧ್ಯಾಹ್ನ ಪಹಲ್ಗಾಮ್ನಲ್ಲಿ ಭಯೋತ್ಪಾದನೆ ಸಂಭವಿಸಿದಾಗ ಪ್ರವಾಸಿಗರ ನೆರವಿಗೆ ಧಾವಿಸಿ ಕಾಶ್ಮೀರದ ಆತಿಥ್ಯಕ್ಕೆ ಮತ್ತೊಂದು ಆಯಾಮವನ್ನು ತಂದುಕೊಟ್ಟವರಲ್ಲಿ ಸೇರಿದ್ದಾರೆ. .2019 ರಲ್ಲಿ ಪುಲ್ವಾಮಾ ದಾಳಿಯ ನಂತರ … Continued

‘ನೀವು ಭಯೋತ್ಪಾದಕರನ್ನು ಬೇಟೆಯಾಡುವಾಗ ನಾವು ನಿಮ್ಮೊಂದಿಗೆ…’: ಪಹಲ್ಗಾಮ್ ದಾಳಿ ನಂತರ ಭಾರತಕ್ಕೆ ಅಮೆರಿಕದ ಬೇಹುಗಾರಿಕೆ ಮುಖ್ಯಸ್ಥೆ ಅಭಯ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಜನರನ್ನು ಕೊಂದ ಭಯೋತ್ಪಾದಕ ದಾಳಿಯ ನಂತರ, ಅಮೆರಿಕವು ಭಾರತದೊಂದಿಗೆ ಇದೆ ಎಂದು ಪ್ರಬಲ ಸಂದೇಶವನ್ನು ನೀಡಿದೆ. ಇದು ದುಃಖ ಮತ್ತು ಭಯೋತ್ಪಾದನೆ ವಿರುದ್ಧ ದೃಢಸಂಕಲ್ಪ ಎರಡನ್ನೂ ಪ್ರತಿಧ್ವನಿಸುತ್ತದೆ ಎಂದು ಅಮೆರಿಕ ಹೇಳಿದೆ. ರಾಜಕೀಯ ವರ್ಣಪಟಲದಾದ್ಯಂತದ ಅಮೇರಿಕನ್ ನಾಯಕರು ಈ ಕ್ರೌರ್ಯವನ್ನು ಖಂಡಿಸಿದ್ದಲ್ಲದೆ, ಭಾರತಕ್ಕೆ ಅಚಲ ಬೆಂಬಲ ನೀಡಿದ್ದಾರೆ. … Continued