42 ವರ್ಷಗಳಿಂದ ಬಹ್ರೇನ್‌ನಲ್ಲಿ ಸಿಲುಕಿ ಬರಲಾಗದೇ ಒದ್ದಾಡುತ್ತಿದ್ದ ಭಾರತದ ವ್ಯಕ್ತಿ ಕೊನೆಗೂ ಮನೆಗೆ ವಾಪಸ್‌…! ಆಗಿದ್ದೇನು..?

ನವದೆಹಲಿ: ಕಳೆದ 42 ವರ್ಷಗಳಿಂದ ಬಹ್ರೇನ್‌ನಲ್ಲಿ ಸಿಲುಕಿಕೊಂಡಿದ್ದ ಭಾರತೀಯ ವ್ಯಕ್ತಿಯೊಬ್ಬರು ಕೊನೆಗೂ ಕೇರಳದಲ್ಲಿರುವ ತಮ್ಮ ಕುಟುಂಬದೊಂದಿಗೆ ಮತ್ತೆ ಒಂದಾಗುತ್ತಿದ್ದಾರೆ. ಗೋಪಾಲನ್ ಚಂದ್ರನ್ ಎಂದು ಎಂಬ ವ್ಯಕ್ತಿ, ಉತ್ತಮ ಉದ್ಯೋಗಾವಕಾಶಗಳನ್ನು ಹುಡುಕುತ್ತಾ ಮಧ್ಯಪ್ರಾಚ್ಯ ದೇಶಕ್ಕೆ ತೆರಳಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಅಲ್ಲಿ ಸಿಲುಕಿಕೊಂಡಿದ್ದರು. ಭಾರತ ಮತ್ತು ವಿದೇಶಗಳಲ್ಲಿ ಅನ್ಯಾಯವನ್ನು ಎದುರಿಸುತ್ತಿರುವ ಭಾರತೀಯರ ಪರವಾಗಿ ಹೋರಾಡುವ ನಿವೃತ್ತ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮನಕಲಕುವ ವೀಡಿಯೊ : ಉಗ್ರರು ಪ್ರವಾಸಿಗರ ಹತ್ತಿರ ಹೋಗಿ ಗುಂಡು ಹಾರಿಸಿದರು…

ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಕ್ಷಣವನ್ನು ತೋರಿಸುವ ಮನಕಲಕುವ ದೃಶ್ಯಗಳು ಹೊರಬಂದಿವೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಹುಲ್ಲುಗಾವಲಿನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದ 26 ಅಮಾಯಕ ಪ್ರವಾಸಿಗರನ್ನು ಕೊಂದರು. ಈಗ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಆಘಾತಕಾರಿ ಕ್ಷಣದ ವೀಡಿಯೊ ಹೊರಬಿದ್ದಿದೆ. ಈ ವೀಡಿಯೊದಲ್ಲಿ, ಗುಲ್ಮಾರ್ಗ್‌ನ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued

ಟೀಂ ಇಂಡಿಯಾ ಮುಖ್ಯ ಕೋಚ್‌ ಗೌತಮ ಗಂಭೀರಗೆ ‘ಐಸಿಸ್‌ ಕಾಶ್ಮೀರ’ದಿಂದ ಜೀವ ಬೆದರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹಾಗೂ ಮಾಜಿ ಸಂಸದ ಗೌತಮ ಗಂಭೀರ ಅವರಿಗೆ “ಐಸಿಸ್ ಕಾಶ್ಮೀರ”ದಿಂದ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆ ಬಂದ ನಂತರ ಗಂಭೀರ ಅವರು ಬುಧವಾರ ದೆಹಲಿ ಪೊಲೀಸರನ್ನು ಸಂಪರ್ಕಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಗಂಭೀರ ಅವರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಲು … Continued

ಪಹಲ್ಗಾಮ್‌ ದಾಳಿಯ ನಂತರ ʼಸಿಂಧೂ ನದಿ ನೀರು ಒಪ್ಪಂದʼ ಸ್ಥಗಿತಗೊಳಿಸಿದ ಭಾರತ ; ಇದರಿಂದ ಪಾಕಿಸ್ತಾನಕ್ಕೆ ಆಗುವ ತೊಂದರೆ ಏನು..?

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ವಿರುದ್ಧ ದಿಟ್ಟ ರಾಜತಾಂತ್ರಿಕ ದಾಳಿಯಲ್ಲಿ, ಭದ್ರತೆ ಕುರಿತ ಕ್ಯಾಬಿನೆಟ್ ಸಮಿತಿ (CCS) 1960 ರ ಸಿಂಧೂ ಜಲ ಒಪ್ಪಂದವನ್ನು (IWT) ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತೆಯ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಹೆಸರುಗಳು

ನವದೆಹಲಿ: ಕಾಶ್ಮೀರದ ರಮಣೀಯ ಕಣಿವೆಗಳಿಗೆ ಶಾಂತಿಯುತ ಭೇಟಿಯಾಗಿ ಆರಂಭವಾದದ್ದು ಮಂಗಳವಾರ ದುರಂತವಾಗಿ ಮಾರ್ಪಟ್ಟಿತು, ಭಯೋತ್ಪಾದಕರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದರು, 26 ಜನರು ಸಾವಿಗೀಡಾದರು ಮತ್ತು ಹಲವಾರು ಜನರು ಗಾಯಗೊಂಡರು. ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಹೇಯ ದಾಳಿಗಳಲ್ಲಿ ಇದು ಒಂದಾಗಿದೆ. ಭಾರತದ ವಿವಿಧ ಭಾಗಗಳಿಂದ ಜನರು ರಜೆ … Continued

ವೀಡಿಯೊ..| 6 ದಿನದ ಹಿಂದಷ್ಟೇ ಮದುವೆಯಾಗಿದ್ದ, ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ನೌಕಾಪಡೆ ಅಧಿಕಾರಿಗೆ ಕಣ್ಣೀರಿನ ವಿದಾಯ ಹೇಳಿದ ಪತ್ನಿ

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ 26 ಜನರಲ್ಲಿ ಒಬ್ಬರಾದ ನೌಕಾ ಅಧಿಕಾರಿ ವಿನಯ ನರ್ವಾಲ್ ಅವರ ಪತ್ನಿ ಹಿಮಾಂಶಿ ನರ್ವಾಲ್ ಅವರು ಹೃದಯ ವಿದ್ರಾವಕ ದೃಶ್ಯದಲ್ಲಿ ತಮ್ಮ ಪತಿಗೆ ಭಾವನಾತ್ಮಕ ವಿದಾಯ ಹೇಳಿದರು. ನೌಕಾಪಡೆಯ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಲೆಫ್ಟಿನೆಂಟ್ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಯಾರು..? ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಯ ದಾಳಿಯನ್ನು ಯಾರು ಮುನ್ನಡೆಸಿದವರು…?

ನವದೆಹಲಿ : 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದ್ದು, ಪಹಲ್ಗಾಮದ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಕನಿಷ್ಠ 26 ಜನರನ್ನು ಸಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) … Continued

ಪಹಲ್ಗಾಮ್‌ ದಾಳಿ | ಭಾರತದ ರಾಜತಾಂತ್ರಿಕ ಯುದ್ಧ: ಪಾಕ್‌ ಗೆ ನೀರುಣಿಸುವ ʼಸಿಂಧೂ ಜಲ ಒಪ್ಪಂದʼ ರದ್ದು ; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ತನಿಖೆಯಲ್ಲಿ “ಗಡಿಯಾಚೆಗಿನ ಸಂಪರ್ಕ” ದ ಬಗ್ಗೆ ರಾಷ್ಟ್ರೀಯ ಭದ್ರತೆಯ ಕುರಿತಾದ ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ (CCS) ಪಾಕಿಸ್ತಾನದ ವಿರುದ್ಧ ಕೆಲವು ಕಠಿಣ ಮತ್ತು ಶಿಕ್ಷಾರ್ಹ ಕ್ರಮಗಳನ್ನು ತೆಗೆದುಕೊಂಡಿದೆ. ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಭಯೋತ್ಪಾದಕ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಉಗ್ರರ ಭೀಕರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 28 ಮಂದಿ ಮೃತಪಟ್ಟಿದ್ದಾರೆ. ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಕಟಿಸಿದ್ದಾರೆ. ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ … Continued