ಬೆಂಗಳೂರು: ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಬಸವನಗೌಡ ಪಾಟೀಲ ಯತ್ನಾಳ ಅವರ ಸವಾಲು ಸ್ವೀಕರಿಸಿರುವ ಶಿವಾನಂದ ಪಾಟೀಲ ಅವರು ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದು, ಯತ್ನಾಳ ವಿರುದ್ಧ ತಾನು ಸ್ಪರ್ಧೆಗೆ ಸಿದ್ಧ ಎಂದು ಹೇಳಿದ್ದಾರೆ. ಆದರೆ ಅದರಲ್ಲಿ ಒಂದು ಟ್ವಿಸ್ಟ್ ಇದೆ.
ನಾನು ಯತ್ನಾಳ ಅವರ ಸವಾಲನ್ನು ಸ್ವೀಕರಿಸಿದ್ದು, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಬಸನಗೌಡ ಆರ್. ಪಾಟೀಲ (ಯತ್ನಾಳ) ಅವರು ಸವಾಲು ಹಾಕಿರುವಂತೆ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಆ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ವಿಜಯಪುರ ನಗರ ಕ್ಷೇತ್ರದಿಂದ ಯತ್ನಾಳ ವಿರುದ್ಧ ಒಮ್ಮೆ ಚುನಾವಣೆ ಸ್ಪರ್ಧೆ ಮಾಡುವ ಆಸೆ ಇದೆ ಎಂದು ಶಿವಾನಂದ ಪಾಟೀಲ ಕೆಲ ದಿನಗಳ ಹಿಂದೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಯತ್ನಾಳ, ಚಿವ ಶಿವಾನಂದ ಪಾಟೀಲ ಅವರಪ್ಪನಿಗೆ ಜನಿಸಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಅವರ ಮನೆತನದ ಹೆಸರು ಪಾಟೀಲ ಅಲ್ಲ ಹಚಡದ ಎಂದು ಇತ್ತು. ಅವರಪ್ಪ ಹಾಗೂ ಅವರ ಅವರ ಸವಾಲು ಸ್ವೀಕರಿಸುವುದಾಗಿ ಹೇಳಿರುವ ಶಿವಾನಂದ ಪಾಟೀಲ, ಸ್ಪೀಕರ್ಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ಅದರಲ್ಲಿ ಯತ್ನಾಳ ರಾಜೀನಾಮೆ ಸ್ವೀಕರಿಸಿದ ನಂತರ ತಮ್ಮ ರಾಜೀನಾಮೆ ಸ್ವೀಕರಿಸಿ ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ