ಕನ್ನಡಿಗರ ಕುರಿತು ವಿವಾದಾತ್ಮಕ ಹೇಳಿಕೆ; ಹಿನ್ನೆಲೆ ಗಾಯಕ ಸೋನು ನಿಗಮ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಕನ್ನಡಿಗರಿಗೆ ನೋವುಂಟುಮಾಡುವ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಕನ್ನಡ ಪರ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮರಾಜ ಎ ಅವರು ದೂರು ದಾಖಲಿಸಿದ್ದಾರೆ.
ಕನ್ನಡಿಗರ ಭಾವನೆಗಳಿಗೆ ನೋವುಂಟುಮಾಡುವ ಮತ್ತು ಕರ್ನಾಟಕದ ವಿವಿಧ ಭಾಷಾ ಸಮುದಾಯಗಳಲ್ಲಿ ದ್ವೇಷವನ್ನು ಕೆರಳಿಸುವ “ಆಕ್ಷೇಪಾರ್ಹ ಮತ್ತು ಭಾವನಾತ್ಮಕವಾಗಿ ಪ್ರಚೋದನಕಾರಿ” ಹೇಳಿಕೆಗಳನ್ನು ಸೋನು ನಿಗಮ್ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

“ಬೆಂಗಳೂರಿನ ವಿರ್ಗೋನಗರದಲ್ಲಿರುವ ಈಸ್ಟ್ ಪಾಯಿಂಟ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ಏಪ್ರಿಲ್ 25 ಮತ್ತು 26 ರಂದು ನಡೆದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲಿಸಲಾಗಿದೆ. ಅವರ ಹೇಳಿಕೆಗಳು ಕನ್ನಡಿಗರ ಭಾವನೆಗಳನ್ನು ತೀವ್ರವಾಗಿ ನೋಯಿಸಿವೆ, ಕರ್ನಾಟಕದ ವಿವಿಧ ಭಾಷಾ ಸಮುದಾಯಗಳಲ್ಲಿ ದ್ವೇಷವನ್ನು ಕೆರಳಿಸುವ ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ಸಾಧ್ಯತೆಯಿದೆ. ಸೋನು ನಿಗಮ್ ಅವರ ಹೇಳಿಕೆಯ ವೀಡಿಯೊ ವೈರಲ್ ಆಗಿದ್ದು, ರಾಜ್ಯಾದ್ಯಂತ ಲಕ್ಷಾಂತರ ಕನ್ನಡಿಗರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 12 ಜಿಲ್ಲೆಗಳಲ್ಲಿ ಜೂ.15ರ ವರೆಗೆ ಜೋರಾದ ಮಳೆ ಮುನ್ಸೂಚನೆ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 351(2), 352(I), ಮತ್ತು 353 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕಾಲೇಜುವೊಂದಕ್ಕೆ ಕಾರ್ಯಕ್ರಮ ನೀಡಲು ಇತ್ತೀಚೆಗೆ ಸೋನು ನಿಗಮ್ (Sonu Nigham) ಬಂದಿದ್ದರು. ಸೋನು ನಿಗಮ್‌ ಹಾಡುವ ವೇಳೆ ಯುವಕನೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಿದ್ದು, ಆದರೆ ಇಷ್ಟಕ್ಕೆ ಹಾಡನ್ನು ಅರ್ಧಕ್ಕೆ ನಿಲ್ಲಿಸಿದ ಸೋನು ನಿಗಮ್, ‘ಕನ್ನಡ, ಕನ್ನಡ.. ಇದೇ ಕಾರಣದಿಂದ ಪಹಲ್ಗಾಮ್‌ನಲ್ಲಿ ದಾಳಿಯಾಗಿದ್ದು’ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ. ಕನ್ನಡದಲ್ಲಿ ಒಂದು ಹಾಡಿ ಎಂಬ ಮನವಿಗೆ ಪಹಲ್ಗಾಮ್‌ ದಾಳಿಗೆ ಹೋಲಿಸಿದಂತೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಸೋನು ನಿಗಮ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. .

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement