ಪಹಲ್ಗಾಮ್ ದಾಳಿ | ಭಾರತದ ಜತೆ ಯುದ್ಧಕ್ಕೆ ಪಾಕ್‌ ಸೈನಿಕರ ಹಿಂಜರಿಕೆ ವರದಿಯ ಮಧ್ಯೆ ಪಿಒಕೆಯಲ್ಲಿ ಸ್ಥಳೀಯರಿಗೆ ಗನ್‌ ತರಬೇತಿ ವೀಡಿಯೊ ವೈರಲ್‌

ನವದೆಹಲಿ: 26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಸಂಬಂಧಗಳು ಹದಗೆಡುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದು, ಭಾರತದದಾಳಿಯ ಭೀತಿ ಎದುರಿಸುತ್ತಿರುವ ಪಾಕಿಸ್ತಾನವು ತನ್ನ ರಕ್ಷಣೆ ಬಲಪಡಿಸಲು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸ್ಥಳೀಯರಿಗೆ ಪಾಕಿಸ್ತಾನಿ ಸೇನೆ ತರಬೇತಿ ನೀಡುತ್ತಿರುವುದನ್ನು ತೋರಿಸುವ ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಪಾಕಿಸ್ತಾನಿ ಸೇನೆಯು ತರಬೇತಿ ಶಿಬಿರಗಳನ್ನು ಸ್ಥಾಪಿಸಿದ್ದು, ಅಲ್ಲಿ ಸ್ಥಳೀಯರಿಗೆ ಶಸ್ತ್ರಾಸ್ತ್ರಗಳನ್ನು ಉಪಯೋಗಿಸುವುದು ಹೇಗೆಂದು ತರಬೇತಿ ನೀಡಲಾಗುತ್ತಿದೆ. ಪಾಕಿಸ್ತಾನಿ ಪಡೆಗಳು ಭಾರತದೊಂದಿಗೆ ಯುದ್ಧದಲ್ಲಿ ತೊಡಗಿಸಿಕೊಳ್ಳಲು ಹಿಂಜರಿಯುತ್ತಿವೆ ಮತ್ತು ಹಲವಾರು ಸೈನಿಕರು ಪಾಕಿಸ್ತಾನ ಸೇನೆಯನ್ನು ತೊರೆದಿದ್ದಾರೆ ಎಂಬ ವರದಿಗಳ ನಡುವೆ ಇದರ ವೀಡಿಯೊಗಳು ಕಾಣಿಸಿಕೊಂಡಿವೆ.

ಭಾರತ ದಾಳಿ ಸನ್ನಿಹಿತ ಎಂದು ಪಾಕಿಸ್ತಾನದ ಸಚಿವರು ಹೇಳಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಸೇನೆಯು ತನ್ನ ಸಂಪನ್ಮೂಲಗಳನ್ನು ಬಳಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ನಂತರ, ಭಾರತವು ಪಾಕಿಸ್ತಾನದ ವಿರುದ್ಧ ಹಲವಾರು ರಾಜತಾಂತ್ರಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದಕ್ಕೂ ಮೊದಲು, ಏಪ್ರಿಲ್ 24 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಭಯೋತ್ಪಾದಕರನ್ನು ಮತ್ತು ಪಿತೂರಿಯ ಭಾಗವಾಗಿದ್ದವರನ್ನು ಶಿಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದರು, ದೇಶದ ಶತ್ರುಗಳು ನಿರಾಯುಧ ಪ್ರವಾಸಿಗರನ್ನು ಗುರಿಯಾಗಿಸಿಕೊಂಡಿದ್ದಾರೆ ಮಾತ್ರವಲ್ಲದೆ ಭಾರತದ ಆತ್ಮದ ಮೇಲೆ ದಾಳಿ ಮಾಡಲು ಧೈರ್ಯ ಮಾಡಿದ್ದಾರೆ ಎಂದು ಪ್ರತಿಪಾದಿಸಿದರು.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಏಪ್ರಿಲ್ 29 ರಂದು ಉನ್ನತ ರಕ್ಷಣಾ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಸರ್ಕಾರಿ ಮೂಲಗಳ ಪ್ರಕಾರ, ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ “ಸಂಪೂರ್ಣ ಸ್ವಾತಂತ್ರ್ಯ” ನೀಡಲಾಯಿತು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಆಕ್ರಮಣಕಾರಿ ನಿಲುವಿನ ಹಿನ್ನೆಲೆಯಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಶುಕ್ರವಾರ ಸೌದಿ ಅರೇಬಿಯಾ ಸೇರಿದಂತೆ “ಅನೇಕ” ದೇಶಗಳನ್ನು ಸಂಪರ್ಕಿಸಿ, ಹೆಚ್ಚಿದ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ತಗ್ಗಿಸಲು ಭಾರತವನ್ನು ಒತ್ತಾಯಿಸುವಂತೆ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement