ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ.
ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಸದ್ಯ ಈ ವಿಚಾರ ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.
ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಶ್ರೀಪಾದ ಪಾಟೀಲ ಎಂಬವರಿಗೆ ಜನಿವಾರ ತೆಗೆಯುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಅದರಂತೆ ಶ್ರೀಪಾದಪಾಟೀಲ್‌ ಜನಿವಾರ ತೆಗೆದು ಪರೀಕ್ಷೆ ಬರೆದಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿ ಗೊತ್ತಾದ ನಂತರ ಪರೀಕ್ಷಾ ಕೇಂದ್ರದ ‌ಮುಂದೆ ಬ್ರಾಹ್ಮಣ ಸಮಾಜ ಪ್ರತಿಭಟನೆ ನಡೆಸಿ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿತು.
ಇತ್ತೀಚೆಗೆ ಸಚಿವ ವಿ.ಸೋಮಣ್ಣ ಅವರು ರೈಲ್ವೆ ಪರೀಕ್ಷೆಯ ವೇಳೆ ಜನಿವಾರ, ಕಾಲುಂಗುರ ಮತ್ತು ಮಾಂಗಲ್ಯ ಸರವನ್ನು ತೆಗೆಸುವಂತಿಲ್ಲ ಎಂದು ಸೂಚನೆ ನೀಡಿದ್ದರು. ಹಾಗಿದ್ದರೂ ಅಧಿಕಾರಿಗಳು ಜನಿವಾರ ತೆಗೆಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಸಾಕಷ್ಟು ರಾದ್ದಾಂತ ನಡೆದರೂ ಈಗ ಮತ್ತೆ ಅದನ್ನು ಪುನರಾವರ್ತನೆಗೊಳಿಸಿರುವುದು ಉದ್ದೇಶಪೂರ್ವಕ ಮಾಡಲಾಗಿದೆಯೇ ಎನ್ನುವ ಅನುಮಾನ ಮೂಡಿಸಿದೆ. ಜನಿವಾರ ತೆಗೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಮುಖ ಸುದ್ದಿ :-   ಬೆಚ್ಚಿ ಬೀಳಿಸುವ ವೀಡಿಯೊ..| ಬೆಂಗಳೂರು : ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement