ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೇ 10ರ ಗುಡುಗು ಸಿಡಿಲಿನಿಂದ ಕೂಡಿದ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ವಾಯುಭಾರ ಕುಸಿತದಿಂದ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಹೀಗಾಗಿ ಮೇ 10ರ ವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಲುದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮೇ 7ರಿಂದ ಮಳೆ ಮತ್ತೆ ಚುರುಕಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮನರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮೇ 7 ಮತ್ತು 8ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಬೀದರ, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆ, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ರಾಮನಗರ, ಬೆಂಗಳೂರು ನಗರ, ರಾಮನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ.
ಮೇ 9ಮತ್ತು 10ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ