ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವಾಯುದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಸಾವಿಗೀಡಾಗಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರರ ಮೈಂಡ್ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
1994 ರಲ್ಲಿ ಭಾರತದಲ್ಲಿ ಬಂಧಿಸಲ್ಪಟ್ಟಿದ್ದ ನಂತರ ಅಫ್ಘಾನಿಸ್ತಾನದ ಕಂದಹಾರ್‌ನಲ್ಲಿ ಏರ್ ಇಂಡಿಯಾ ಐಸಿ 814 ವಿಮಾನ ಅಪಹರಣದ ನಂತರ ಬಿಡುಗಡೆಯಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಜರ್ ಮಸೂದ್ ಹೇಳಿಕೆಯ ಪ್ರಕಾರ, ಬಹಾವಲ್ಪುರದ ಜಾಮಿಯಾ ಮಸೀದಿ ಸುಭಾನ್ ಅಲ್ಲಾಹ್ ಎಂಬ ಜೆಇಎಂ ಪ್ರಧಾನ ಕಚೇರಿಯ ಮೇಲಿನ ದಾಳಿಯಲ್ಲಿ ಕೊಲ್ಲಲ್ಪಟ್ಟವರಲ್ಲಿ ತನ್ನ ಅಕ್ಕ, ಅವಳ ಪತಿ, ಸೋದರಳಿಯ ಮತ್ತು ಆತನ ಪತ್ನಿ, ಸೊಸೆ ಮತ್ತು ಕುಟುಂಬದ ಐದು ಮಕ್ಕಳು ಸೇರಿದ್ದಾರೆ.
“ನನ್ನ ಕುಟುಂಬದ ಹತ್ತು ಸದಸ್ಯರು ಇಂದು ರಾತ್ರಿ ಒಟ್ಟಿಗೆ ಈ ಸಂತೋಷದಿಂದ ಆಶೀರ್ವದಿಸಲ್ಪಟ್ಟರು… ಐದು ಜನರು ಮುಗ್ಧ ಮಕ್ಕಳು, ನನ್ನ ಅಕ್ಕ, ಅವಳ ಪತಿ. ನನ್ನ ವಿದ್ವಾಂಸ ಸೋದರಳಿಯ ಮತ್ತು ಆತನ ಹೆಂಡತಿ ಮತ್ತು ನನ್ನ ಪ್ರೀತಿಯ ಸಹೋದರ ಹುಜೈಫಾ ಮತ್ತು ಆತನ ತಾಯಿ ಹಗೂ ಇನ್ನೂ ಇಬ್ಬರು ಆತ್ಮೀಯ ಸಹಚರರು ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಕೊಲ್ಲಲ್ಪಟ್ಟವರು ಅಲ್ಲಾಹನ ಅತಿಥಿಗಳಾಗಿದ್ದಾರೆ ಎಂದು ಹೇಳಿದರು.
ತಾನು ಈ ಸಾವುಗಳಿಗೆ “ವಿಷಾದ ಅಥವಾ ಹತಾಶೆ” ಹೊಂದಿಲ್ಲ ಎಂದು ಹೇಳಿದರು. “ಬದಲಿಗೆ, ನಾನು ಕೂಡ ಈ ಹದಿನಾಲ್ಕು ಸದಸ್ಯರ ಸಂತೋಷದ ಕಾರವಾನ್‌ಗೆ ಸೇರುತ್ತಿದ್ದೆ ಎಂದು ನನಗೆ ಮತ್ತೆ ಮತ್ತೆ ಅನಿಸುತ್ತಿದೆ” ಎಂದು ಅವರು ಹೇಳಿದರು. ಭಯೋತ್ಪಾದಕ “ತಾನು ಹೊರಡುವ ಸಮಯ ಬಂದಿದೆ, ಆದರೆ ಭಗವಂತ ತನ್ನನ್ನು ಕೊಲ್ಲಲಿಲ್ಲ” ಎಂದು ಹೇಳಿದರು. ಅಂತ್ಯಕ್ರಿಯೆಯ ಪ್ರಾರ್ಥನೆಗೆ ಜನರನ್ನು ಆಹ್ವಾನಿಸಿದರು.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿತ ಐವತ್ತಾರು ವರ್ಷದ ಮಸೂದ್ ಅಜರ್, 2001 ರ ಸಂಸತ್ತಿನ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್‌ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿ ಸೇರಿದಂತೆ ಭಾರತದಲ್ಲಿ ನಡೆದ ಅನೇಕ ಭಯೋತ್ಪಾದಕ ದಾಳಿಗಳ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿದ್ದಾನೆ. ಭಯೋತ್ಪಾದಕ ಪಾಕಿಸ್ತಾನದಲ್ಲಿದ್ದಾನೆ ಎಂಬುದು ಬಹಿರಂಗ ರಹಸ್ಯವಾಗಿದ್ದರೂ, ಇಸ್ಲಾಮಾಬಾದ್ ಆತನ ಬಗ್ಗೆ ಮಾಹಿತಿ ಇಲ್ಲ ಎಂದು ಪದೇ ಪದೇ ನಿರಾಕರಿಸುತ್ತಿದೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ಸೋಮವಾರ ರಾತ್ರಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ 24 ನಿಖರ ಕ್ಷಿಪಣಿಗಳನ್ನು ದಾಳಿಯಲ್ಲಿ ಸುಮಾರು 80 ಕ್ಕೂ ಹೆಚ್ಚು ಭಯೋತ್ಪಾದಕರು ಸಾವಿಗೀಡಾಗಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸರ್ಕಾರಿ ಮೂಲಗಳು ತಿಳಿಸಿವೆ.
ನಾಗರಿಕರ ಸಾವುನೋವುಗಳಿಗೆ ಭಾರತೀಯ ಅಧಿಕಾರಿಗಳು ವಿಷಾದ ವ್ಯಕ್ತಪಡಿಸಿದ್ದಾರೆ ಆದರೆ ಅವುಗಳನ್ನು ಕನಿಷ್ಠ ಮಟ್ಟಕ್ಕೆ ಇರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಒತ್ತಿ ಹೇಳಿದ್ದಾರೆ. ಎಲ್ಲಾ ಗುರಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ ಮತ್ತು ಭಯೋತ್ಪಾದಕ ಚಟುವಟಿಕೆಗೆ ನೇರವಾಗಿ ಸಂಬಂಧಿಸಿದವರ ಮೇಲೆ ದಾಳಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿಮ್ಮ ಕಾಮೆಂಟ್ ಬರೆಯಿರಿ