ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

ನವದೆಹಲಿ: ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಶನಿವಾರ ರಾತ್ರಿ ಭಾರತ ಹೇಳಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿ ಕದನ ವಿರಾಮ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪಾಕಿಸ್ತಾನ ಆ … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued

ಭಾರತದ ಆಪರೇಷನ್ ಸಿಂಧೂರ ದಾಳಿಯಲ್ಲಿ ಈ ಐವರು ನೊಟೊರಿಯಸ್‌ ಭಯೋತ್ಪಾದಕರ ಹತ್ಯೆ ; ಆದ್ರೆ ಅಂತ್ಯಕ್ರಿಯೆ ವೇಳೆ ಸರ್ಕಾರಿ ಗೌರವ ನೀಡಿದ ಪಾಕ್‌..!

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಜೈಶ್‌-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೈಬಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐದು ನೊಟೊರಿಯಸ್‌ ಭಯೋತ್ಪಾದಕರು ಆಪರೇಷನ್ ಸಿಂಧೂರದ ಆರಂಭಿಕ ಹಂತದ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ. ಭಾರತದ ಪಡೆಗಳು ಮೇ 7 ರ ತಡರಾತ್ರಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಒಳಗಿದ್ದ ಭಯೋತ್ಪಾದಕ ಶಿಬಿರಗಳ ಮೇಲೆ ವಾಯು ದಾಳಿ ಮಾಡಿದಾಗ ಕೊಲ್ಲಲ್ಪಟ್ಟರು … Continued

ಪಾಕಿಸ್ತಾನದಿಂದ ದೂರವಾಣಿ ಕರೆ ; ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ ; ಮಿಲಿಟರಿ ಕಾರ್ಯಾಚರಣೆಗಳು ಸ್ಥಗಿತ | ವಿದೇಶಾಂಗ ಸಚಿವಾಲಯ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಮತ್ತು ಸಂಜೆ 5 ಗಂಟೆಗೆ (IST) ಮಿಲಿಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಶನಿವಾರ ತಿಳಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ನವದೆಹಲಿಯಲ್ಲಿ ಸಂಕ್ಷಿಪ್ತ ಪತ್ರಿಕಾಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ. “ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು, ಶನಿವಾರ ಸಂಜೆ 3:35 ಕ್ಕೆ ಭಾರತದ … Continued

ವೀಡಿಯೊಗಳು…| ಪಾಕಿಸ್ತಾನದ 4 ವಾಯುನೆಲೆಗಳ ಭಾರತದ ದಾಳಿ, ಡ್ರೋನ್ ಉಡಾವಣಾ ಪ್ಯಾಡ್‌ ನಾಶ, ಪಾಕ್‌ 2 ಫೈಟರ್ ಜೆಟ್ ಹೊಡೆದುರುಳಿಸಿದ ಸೇನೆ

ನವದೆಹಲಿ: ಶನಿವಾರ (ಮೇ 10) ಭಾರತವು ಪಾಕಿಸ್ತಾನದ ಕನಿಷ್ಠ ನಾಲ್ಕು ವಾಯುನೆಲೆಗಳ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳಿಂದ ದಾಳಿ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿದ ವರದಿಗಳು ತಿಳಿಸಿವೆ. ಪಾಕಿಸ್ತಾನದ ಮೂರು ಪ್ರಮುಖ ಮಿಲಿಟರಿ ವಾಯುನೆಲೆಗಳ ಮೇಲೆ ಹಾಗೂ ಸಿಯಾಲ್‌ಕೋಟ್ ಮತ್ತು ನರೋವಾಲ್‌ನಲ್ಲಿರುವ ಪಾಕಿಸ್ತಾನಿ ಪೋಸ್ಟ್‌ಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದೆ. ಟ್ಯೂಬ್-ಲಾಂಚಡ್ ಡ್ರೋನ್‌ಗಳನ್ನು ಸಹ … Continued

ವೀಡಿಯೊ..| ಭಾರತದ ಜೊತೆ ಸಂಘರ್ಷದಿಂದ ಪಾಕಿಸ್ತಾನಕ್ಕೆ ದೊಡ್ಡ ಶಾಕ್‌ : ತಮ್ಮದು ಸ್ವತಂತ್ರ ದೇಶ ಎಂದು ಘೋಷಿಸಿಕೊಂಡ ಬಲೂಚಿಸ್ತಾನ ಪ್ರಾಂತ್ಯ…!

ಪಾಕಿಸ್ತಾನವು ತನ್ನ ಪೂರ್ವ ಭಾಗದಲ್ಲಿ ಭಾರತೀಯ ನಾಗರಿಕರು ಮತ್ತು ಮಿಲಿಟರಿ ನೆಲೆಗಳ ಮೇಲೆ ನಿರರ್ಥಕ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸುವಲ್ಲಿ ನಿರತವಾಗಿದ್ದರೆ, ಅತ್ತ ಪಾಕಿಸ್ತಾನದಲ್ಲಿ ಬಲೂಚ್ ಬಂಡುಕೋರರು ಪಾಕ್‌ ಭದ್ರತಾ ಪಡೆಗಳ ವಿರುದ್ಧ ತಮ್ಮ ದಾಳಿಯನ್ನು ಹೆಚ್ಚಿಸಿದ್ದಾರೆ. ಬಲೂಚ್ ಹೋರಾಟಗಾರರ ಕನಿಷ್ಠ ಮೂರು ಗುಂಪುಗಳು ಅದರ ಪಶ್ಚಿಮ ಪ್ರಾಂತ್ಯವಾದ ಬಲೂಚಿಸ್ತಾನದ ಕೆಲವು ಭಾಗಗಳ ನಿಯಂತ್ರಣವನ್ನು … Continued

ವೀಡಿಯೊ..| ಭಾರತದ 20 ನಗರಗಳ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ ;ಎಲ್ಲವನ್ನೂ ಹೊಡೆದುರುಳಿಸಿದ ಸೇನೆ…

ಜಮ್ಮು: ಪಾಕಿಸ್ತಾನ’ ಮತ್ತೆ ಜಮ್ಮು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ಮತ್ತು ಆವಂತಿಪೋರಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನಾದ್ಯಂತ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಡ್ರೋನ್‌ಗಳು ಸತತ ಎರಡನೇ … Continued