ಸವದತ್ತಿ | ಸಿಡಿಲು ಬಡಿದು ಇಬ್ಬರು ಸಾವು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement