ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Rain) ಸಾಧ್ಯತೆಯಿದ್ದು, ಹವಾಮಾನ ಇಲಾಖೆ (IMD) ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ (Yellow Alert) ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಮೊದಲಾದ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೆ, ಈ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement