ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ನವದೆಹಲಿ : ದೆಹಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿತರಾಗಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಸರ್ಕಾರ ದೇಶದಿಂದ ಹೊರಹಾಕಿದ್ದು, ಹೆಸರು ಹೇಳದ ಅಧಿಕಾರಿಗೆ 24 ಗಂಟೆಗಳ ಒಳಗೆ ದೇಶ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ.
“ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ” ಕೃತ್ಯಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡೆವಿನ ಸಂಘರ್ಷದ ನಡುವೆ ಈ ಬೆಳವಣಿಗೆ ನಡೆದಿದೆ.
ಮಂಗಳವಾರ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ’ಅಫೇರ್ಸ್‌ಗೆ ಔಪಚಾರಿಕ ಡಿಮಾರ್ಚ್ ಹೊರಡಿಸಲಾಗಿದ್ದು, ಅಧಿಕಾರಿಯ ವರ್ತನೆಗೆ ಭಾರತದ ತನ್ನ ಬಲವಾದ ಆಕ್ಷೇಪಣೆಯನ್ನು ತಿಳಿಸಿದೆ. ಆಪಾದಿತ ಚಟುವಟಿಕೆಗಳ ಸ್ವರೂಪವನ್ನು ವಿದೇಶಾಂಗ ಸಚಿವಾಲಯವು ವಿವರಿಸಲಿಲ್ಲ. ಈ ಸಂಬಂಧ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ’ಅಫೇರ್ಸ್‌ಗೆ ಡಿಮಾರ್ಚ್ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ.
26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಮಾಡಲು ನವದೆಹಲಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement