ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ.
ಮೇ 1ರಂದು ಮೊಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದ ಆರೋಪಿ ಸುಹಾಸ ಶೆಟ್ಟಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಕೊಚ್ಚಿ ಕೊಲೆಗೈದಿದ್ದರು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರು ಈಗಾಗಲೇ 8 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳಾದ ಅಬ್ದುಲ್ ಖಾದರ್ ಮತ್ತು ನೌಷದ್ ಎಂಬವರನ್ನು ಹೆಚ್ಚಿನ ತನಿಖೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಅಜರುದ್ದೀನ್ ಮೇಲೆ ಈ ಹಿಂದೆ ಮೂರು ಪ್ರಕರಣಗಳು ದಾಖಲಾಗಿದ್ದವು ಎನ್ನಲಾಗಿದೆ. ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸರು ಠಾಣೆಯಲ್ಲಿ ಕೇಸ್ ಗಳಿವೆ. ಸುಹಾಸ ಶೆಟ್ಟಿ ಚಲನವಲನದ ಬಗ್ಗೆ ಮಾಹಿತಿ ನೀಡಿ ಹತ್ಯೆಗೆ ಈ ಆರೋಪಿಗಳು ಸಹಕರಿಸಿದ್ದರು. ಸುಹಾಸ ಶೆಟ್ಟಿ ಹತ್ಯೆ ಬಳಿಕ ಆರೋಪಿಗಳು ಕಾರಿನಲ್ಲಿ ಪಾರಿಯಾಗಲು ಅಬ್ದುಲ್ ಖಾದರ್ ಸಹಕರಿಸಿದ್ದ ಽಹಾಗೂ ಸುಹಾಸ ಹತ್ಯೆಗೆ ಉಳಿದ ಆರೋಪಿಗಳ ಜೊತೆಗೆ ನೌಷದ್ ಸಂಚು ರೂಪಿಸಿದ್ದ ಎಂಬ ಆರೋಪವಿದೆ. ನೌಷದ್ ವಿರುದ್ಧ ಕೊಲೆ, ಕೊಲೆ ಯತ್ನ, ದರೋಡೆ ಸೇರಿದಂತೆ ಕೆಲ ಪ್ರಕರಣಗಳಿವೆ.
ಸುಹಾಸ ಶೆಟ್ಟಿ ಕೊಲೆ ಮಾಡಲು ಮೂರು ತಿಂಗಳ ಹಿಂದೆಯೇ ಸಂಚು ರೂಪಿಸಲಾಗಿತ್ತು. ಸಫ್ವಾನ್ ತಂಡಕ್ಕೆ ಫಾಜಿಲ್ ತಮ್ಮ ಆದಿಲ್ 3 ಲಕ್ಷ ರೂಪಾಯಿ ಹಣ ನೀಡಿದ್ದ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement