ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಯನ್ನು ಭೇಟಿ ಮಾಡಲು ಭಾರತದ ತಂಡವೊಂದು ನ್ಯೂಯಾರಕ್‌ಗೆ ತೆರಳಿದೆ ಎಂದು ಹೇಳಲಾಗಿದೆ. ವಿಶ್ವಸಂಸ್ಥೆಯಿಂದ ನಿಷೇಧಿಸಲ್ಪಟ್ಟ ಪಾಕಿಸ್ತಾನಿ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಒಂದು ಶಾಖೆಯೇ ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಎಂಬ ಭಯೋತ್ಪಾದಕ ಗುಂಪು.

ಭಾರತೀಯ ತಾಂತ್ರಿಕ ತಂಡವು ನ್ಯೂಯಾರ್ಕ್‌ನಲ್ಲಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಈ ತಂಡವು ಬುಧವಾರ 1267 ನಿರ್ಬಂಧ ಸಮಿತಿಯ ಮೇಲ್ವಿಚಾರಣಾ ತಂಡ ಮತ್ತು ವಿಶ್ವಸಂಸ್ಥೆಯ ಇತರ ಪಾಲುದಾರ ರಾಷ್ಟ್ರಗಳೊಂದಿಗೆ ಸಂವಹನ ನಡೆಸುತ್ತಿದೆ. ತಂಡದವರು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕಚೇರಿ (UNOCT) ಮತ್ತು ಭಯೋತ್ಪಾದನಾ ನಿಗ್ರಹ ಸಮಿತಿಯ ಕಾರ್ಯನಿರ್ವಾಹಕ ನಿರ್ದೇಶನಾಲಯ (CTED) ಅನ್ನು ಸಹ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಮಧ್ಯಪ್ರದೇಶದ ಸಚಿವ

1267 ISIL (ದಾಯಿಶ್), ಅಲ್-ಖೈದಾ ಸಮಿತಿಯು ಭದ್ರತಾ ಮಂಡಳಿಯು ವಿಧಿಸಿರುವ ನಿರ್ಬಂಧ ಕ್ರಮಗಳನ್ನು ನೋಡಿಕೊಳ್ಳುತ್ತದೆ. 26 ನಾಗರಿಕರನ್ನು ಕೊಂದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿನ ಭಯೋತ್ಪಾದಕ ಕಾರ್ಖಾನೆಗಳ ಮೇಲೆ ‘ಆಪರೇಷನ್ ಸಿಂಧೂರʼ ಹೆಸರಿನ ಸೇನಾ ಕಾರ್ಯಾಚರಣೆ ಪ್ರಾರಂಭಿಸಿತು. ದಾಳಿಯ ಹೊಣೆಯನ್ನು ಟಿಆರ್‌ಎಫ್ ಹೊತ್ತುಕೊಂಡಿತ್ತು.
‘ಆಪರೇಷನ್ ಸಿಂಧೂರ’ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಲ್ಲಿ ಕನಿಷ್ಠ 100 ಭಯೋತ್ಪಾದಕರು ಸತ್ತಿದ್ದಾರೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಸರ್ವಪಕ್ಷ ಸಭೆಯಲ್ಲಿ ತಿಳಿಸಿದರು.

ಈ ವಿಷಯದ ಬಗ್ಗೆ ವಿಶಾಲವಾದ ರಾಜಕೀಯ ಒಮ್ಮತವನ್ನು ರೂಪಿಸಲು ಇದನ್ನು ಕರೆಯಲಾಗಿದೆ ಮತ್ತು ನಾಯಕರು ಪ್ರಬುದ್ಧತೆಯನ್ನು ತೋರಿಸಿದರು ಮತ್ತು ಜಗಳವಾಡಲಿಲ್ಲ ಎಂದು ಸಭೆಯ ನಂತರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸುದ್ದಿಗಾರರಿಗೆ ತಿಳಿಸಿದರು. ಎಲ್ಲಾ ಭಾರತೀಯರ, ವಿಶೇಷವಾಗಿ ಗಡಿ ಪ್ರದೇಶಗಳಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಸುರಕ್ಷತೆಯ ವಿಷಯದ ಬಗ್ಗೆ ನಾಯಕರು ತಮ್ಮ ಕಳವಳಗಳನ್ನು ಹಂಚಿಕೊಂಡರು, ಆದರೆ ಭಯೋತ್ಪಾದನೆಯ ವಿರುದ್ಧದ ಈ ಹೋರಾಟದಲ್ಲಿ ರಾಷ್ಟ್ರವು ಒಗ್ಗಟ್ಟಾಗಿದೆ ಎಂದು ಎಲ್ಲರೂ ಬೆಂಬಲವನ್ನು ನೀಡಿದರು.

ಪ್ರಮುಖ ಸುದ್ದಿ :-   ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement