ವೀಡಿಯೊ..| ಕಾಶ್ಮೀರ ; ಪುಲ್ವಾಮಾ ಎನ್ಕೌಂಟರಿನಲ್ಲಿ ಮೂವರು ಭಯೋತ್ಪಾದಕರ ಹತ್ಯೆ ; ಒಬ್ಬನ ಕೊನೆಯ ಕ್ಷಣ ಡ್ರೋನ್ ನಲ್ಲಿ ಸೆರೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹತರಾದ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಸಂಬಂಧ ಹೊಂದಿದ್ದಾರೆಂದು ಮೂಲಗಳು ತಿಳಿಸಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಈ ಭಯೋತ್ಪಾದಕರ ಪಾತ್ರವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ (ಐಜಿಪಿ) ವಿ ಕೆ ಬಿರ್ಡಿ ಹೇಳಿದ್ದಾರೆ.

ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ಟ್ರಾಲ್ ಪ್ರದೇಶದಲ್ಲಿ ಇಂದು (ಮೇ ೧೫) ಮುಂಜಾನೆ ಎನ್ಕೌಂಟರ್ ಪ್ರಾರಂಭವಾಯಿತು. ಇದು ಮೂರು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎರಡನೇ ಎನ್ಕೌಂಟರ್ ಆಗಿದೆ.
ಮಂಗಳವಾರ ಶೋಪಿಯಾನ್ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಾರತೀಯ ಪಡೆಗಳು ಮೂರು ಲಷ್ಕರ್-ಎ-ತೈಬಾ ಭಯೋತ್ಪಾದಕರನ್ನು ಹೊಡೆದುರುಳಿಸಿದ ಎರಡು ದಿನಗಳ ನಂತರ ಈ ಎನ್ಕೌಂಟರ್ ನಡೆದಿದೆ. ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮುನ್ನ ಡ್ರೋನ್ ನಲ್ಲಿ ಭಯೋತ್ಪಾದಕರು ಸೆರೆಯಾಗಿದ್ದಾರೆ. ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವೀಡಿಯೊದಲ್ಲಿ, ಒಬ್ಬ ಭಯೋತ್ಪಾದಕ ಬಂದೂಕಿನಿಂದ ಶೆಡ್ ಅಡಿಯಲ್ಲಿ ಅಡಗಿರುವುದನ್ನು ಕಾಣಬಹುದು. ಗುರುವಾರ ಬೆಳಿಗ್ಗೆ, ಪಡೆಗಳು ದಕ್ಷಿಣ ಕಾಶ್ಮೀರದ ಅವಂತಿಪೋರಾದ ನಾಡರ್ ಟ್ರಾಲ್ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ ಮೂವರು ಭಯೋತ್ಪಾದಕರು ಹತರಾಗಿದ್ದಾರೆ.

ಪಹಲ್ಗಾಮ್ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ತೀವ್ರಗೊಂಡಿವೆ. ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಘಟನೆಯ ಶಾಖೆಯಾಗಿರುವ ಟಿಆರ್‌ಎಫ್, ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರು, ಹೆಚ್ಚಾಗಿ ಪ್ರವಾಸಿಗರು ಸಾವನ್ನಪ್ಪಿದ ಭೀಕರ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.
ದಾಳಿಯ ನಂತರ ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಬೆನ್ನಟ್ಟುವುದಾಗಿ ಪ್ರತಿಜ್ಞೆ ಮಾಡಿತ್ತು. ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಸ್ಥಳಗಳಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ‘ಆಪರೇಷನ್ ಸಿಂಧೂರ’ ಅನ್ನು ಪ್ರಾರಂಭಿಸಿತು. ಪಾಕಿಸ್ತಾನದಲ್ಲಿ ಲಷ್ಕರ್ ಮತ್ತು ಜೆಇಎಂ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಲಾಯಿತು.

ಪ್ರಮುಖ ಸುದ್ದಿ :-   ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement