ನರಕ -ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದ್ರೆ ನಾನು ಆಯ್ಕೆ ಮಾಡುವುದು ನರಕವನ್ನೇ… ; ಜಾವೇದ್‌ ಅಖ್ತರ್‌

ಮುಂಬೈ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತನಾಡುವಾಗ ಬಾಲಿವುಡ್‌ನ ಖ್ಯಾತ ಬರಹಗಾರ ಜಾವೇದ್ ಅಖ್ತರ್ ಅವರು, ಒಂದು ವೇಳೆ ನರಕ ಮತ್ತು ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದರೆ, ನಾನು ನರಕವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆಯೇ ಹೊರತು ಪಾಕಿಸ್ತಾನವನಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಂಬೈನಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಭಯೋತ್ಪಾದನೆಗೆ ಆಶ್ರಯ ನೀಡುವ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ನನ್ನ ರಾಜಕೀಯ ನಿಲುವುಗಳನ್ನು ಒಪ್ಪದ ಹಲವರಿದ್ದಾರೆ. ಒಂದು ಕಡೆ ಕೆಲವರು ನನ್ನನ್ನು ‘ಕಾಫಿರ್’ ಎಂದು ಕರೆಯುತ್ತಾರೆ ಮತ್ತು ನಾನು ‘ಜಹನ್ನಮ್’ (ನರಕ) ಕ್ಕೆ ಹೋಗುತ್ತೇನೆ ಎಂದು ಅವರು ಹೇಳುತ್ತಾರೆ. ಇನ್ನೊಂದು ಕಡೆ ಮತ್ತೆ ಕೆಲವರು ನನ್ನನ್ನು ಜಿಹಾದಿ ಎಂದು ಕರೆಯುತ್ತಾರೆ ಮತ್ತು ನಾನು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳುತ್ತಾರೆ. ಒಂದು ವೇಳೆ ನರಕ ಮತ್ತು ಪಾಕಿಸ್ತಾನದ ನಡುವೆ ಆಯ್ಕೆ ಮಾಡುವ ಪರಿಸ್ಥಿತಿ ಬಂದರೆ, ನಾನು ನರಕಕ್ಕೆ ಹೋಗಲು ಇಷ್ಟಪಡುತ್ತೇನೆಯೇ ಹೊರತು ಪಾಕಿಸ್ತಾನವನ್ನಲ್ಲ. ಏಕೆಂದರೆ ನರಕವು ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ ಎಂದು ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ಕುರಿತು ಮಾತನಾಡುವ ಸಂದರ್ಭದಲ್ಲಿ ಅಖ್ತರ್‌ ಹೇಳಿದ್ದಾರೆ..

ಸ್ವಾತಂತ್ರ್ಯದ ನಂತರ ಪಾಕಿಸ್ತಾನ ಕಾಶ್ಮೀರದ ಮೇಲೆ ದಾಳಿ ಮಾಡಿದಾಗ, ಕಾಶ್ಮೀರಿಗಳು ಅವರನ್ನು ಮೂರು ದಿನಗಳ ಕಾಲ ತಡೆದಿದ್ದರು, ನಮ್ಮ ಸೈನ್ಯವು ಅದರ ನಂತರವೇ ತಲುಪಿತು. ಸತ್ಯವೆಂದರೆ ಭಾರತವಿಲ್ಲದೆ ಕಾಶ್ಮೀರಿಗಳಿಗೆ ಬದುಕು ಇಲ್ಲ. (ಪಹಲ್ಗಾಮ್‌ನಲ್ಲಿ) ನಡೆದದ್ದು ಅವರಿಗೆ ಹೆಚ್ಚು ನೋವುಂಟು ಮಾಡಿದೆ. ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಕಾಶ್ಮೀರಿಗಳು ಭಾರತೀಯರು ಮತ್ತು ಅವರಲ್ಲಿ 99% ಭಾರತಕ್ಕೆ ನಿಷ್ಠರಾಗಿದ್ದಾರೆ ಎಂದು ಅಖ್ತರ್‌ ಹೇಳಿದ್ದಾರೆ.
ನಾನು 19 ವರ್ಷದವನಿದ್ದಾಗ ಮುಂಬೈಗೆ ಬಂದೆ. ನಾನು ಏನಾಗಿದ್ದೇನೆಯೋ ಅದು ಈ ನಗರ ಮತ್ತು ಮಹಾರಾಷ್ಟ್ರದಿಂದ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಹೈದರಾಬಾದ್‌ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಬೆಂಕಿ ಅವಘಡ : 8 ಮಕ್ಕಳು ಸೇರಿ 17 ಮಂದಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement