ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹೆಚ್ಚಿದ ಕಣ್ಗಾವಲು ನಡುವೆಯೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂರು ರಾಜ್ಯಗಳಿಂದ ಕನಿಷ್ಠ ಒಂಬತ್ತು ಜನರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದಾರೆ. ಈ ಇವರಲ್ಲಿ ಕನಿಷ್ಠ ನಾಲ್ಕು ಜನರನ್ನು ಹರಿಯಾಣದಲ್ಲಿ, ಮೂವರನ್ನು ಪಂಜಾಬ್‌ನಲ್ಲಿ ಮತ್ತು ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸುತ್ತಿದ್ದಾರೆಂದು … Continued

ಕರ್ನಲ್ ಸೋಫಿಯಾ ಬಗ್ಗೆ ಸಚಿವ ವಿಜಯ ಶಾ ಹೇಳಿಕೆ | ಎಸ್ಐಟಿ ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ ; ಬಂಧನಕ್ಕೆ ತಡೆ

ನವದೆಹಲಿ: ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳ ಮೇಲೆ ನಡೆಸಲಾದ ಸೇನಾ ಕಾರ್ಯಾಚರಣೆ ‘ಆಪರೇಷನ್ ಸಿಂಧೂರ’ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಕುರೇಷಿ ಅವರನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ಸಚಿವ ಕುವರ ವಿಜಯ ಶಾ ನೀಡಿದ ಹೇಳಿಕೆಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸುಪ್ರೀಂ … Continued

ಏಷ್ಯಾದ ಕೆಲವು ದೇಶಗಳಲ್ಲಿ ಕೋವಿಡ್-19 ಸೋಂಕು ಮತ್ತೆ ಹೆಚ್ಚಳ ; JN.1 ರೂಪಾಂತರ ಎಷ್ಟು ಅಪಾಯಕಾರಿ..?

ನವದೆಹಲಿ: ಕೋವಿಡ್-19 ಮತ್ತೊಮ್ಮೆ ಸುದ್ದಿಯಾಗುತ್ತಿದೆ. ಏಷ್ಯಾದ ಕೆಲವು ಭಾಗಗಳಲ್ಲಿ ಕೋವಿಡ್‌-19 (COVID-19) ಸಾಂಕ್ರಾಮಿಕದ ಹೊಸ ಅಲೆ ಕಾಣಿಸಿಕೊಂಡಿದ್ದು, ಇದು ವಿಶ್ವದಾದ್ಯಂತ ಎಚ್ಚರಿಕೆ ನೀಡಿದೆ. ಹಾಂಗ್ ಕಾಂಗ್‌ನಲ್ಲಿ, 10 ವಾರಗಳಲ್ಲಿ ಸಾಪ್ತಾಹಿಕ ಪ್ರಕರಣಗಳು 30 ಪಟ್ಟು ಹೆಚ್ಚಾಗಿದೆ. ಸಿಂಗಾಪುರದಲ್ಲಿ ಒಂದು ವಾರದಲ್ಲಿ ಪ್ರಕರಣಗಳು ಸುಮಾರು ಶೇ. 30 ರಷ್ಟು ಹೆಚ್ಚಾಗಿದೆ. ಚೀನಾ ಮತ್ತು ಥೈಲ್ಯಾಂಡ್‌ನಲ್ಲಿಯೂ ಗಮನಾರ್ಹ ಏರಿಕೆಯ … Continued

ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು ; ನಾಲ್ವರ ರಕ್ಷಣೆ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (೨೫) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ … Continued

ಭಯೋತ್ಪಾದನೆ ವಿರುದ್ಧ ಭಾರತವು ಜಾಗತಿಕವಾಗಿ ತಲುಪುವ ಪ್ರಯತ್ನಕ್ಕೆ ಸ್ಥಳೀಯ ರಾಜಕೀಯ ತರಬೇಡಿ ; ಸಂಜಯ ರಾವತಗೆ ಶರದ್ ಪವಾರ್

ಪುಣೆ: ಎನ್‌ಸಿಪಿ (ಶರದ್‌ ಪವಾರ್‌) ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಮೈತ್ರಿಕೂಟದ ನಾಯಕ ಸಂಜಯ ರಾವತ್ ಅವರ ಹೇಳಿಕೆಯನ್ನು  ತಾವು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ. ಭಯೋತ್ಪಾದನೆ ಹಾಗೂ ಅದರ ವಿರುದ್ಧ ದೇಶ ಕೈಗೊಂಡ ಕ್ರಮಗಳ ಕುರಿತು ಭಾರತದ ಜಾಗತಿಕ ಸಂಪರ್ಕ ಪ್ರಯತ್ನಗಳಲ್ಲಿ “ಸ್ಥಳೀಯ ಮಟ್ಟದ ರಾಜಕೀಯ”ವನ್ನು ತರಬೇಡಿ ಎಂದು … Continued

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಇದೆ. ಅರಬ್ಬೀ ಸಮುದ್ರದ ರಾಜ್ಯದ ಕರಾವಳಿಯ ಬಳಿ ಮೇ 22 ರಂದು ವಾಯುಭಾರ ಕುಸಿತ ಆಗಲಿದೆ. ಇದರ ಪ್ರಭಾವದಿಂದ ಮೇ 24ರ ವರೆಗೆ ಕರ್ನಾಟಕದಾದ್ಯಂತ ಉತ್ತಮ ಮಳೆ ಆಗಲಿದೆ … Continued

ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

ಅಮೃತಸರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತೀಕಾರವಾಗಿ ಮೇ 7-8ರ ಮಧ್ಯರಾತ್ರಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರದ ಸ್ವರ್ಣ ಮಂದಿರದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು ಎಂದು 15 ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ … Continued

ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

ಬೆಂಗಳೂರು : ಭಾನುವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆಯವರೆಗೆ ಆರು ಗಂಟೆಗಳಿಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವಾರು ತಗ್ಗು ಪ್ರದೇಶಗಳಲ್ಲಿ ತೀವ್ರ ನೀರು ನಿಂತಿದ್ದು, ದೈನಂದಿನ ಜನಜೀವನ ಅಸ್ತವ್ಯಸ್ತವಾಗಿತ್ತು. ಬೆಂಗಳೂರಿನಲ್ಲಿ ಕಳೆದ 48 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಬಳಕೆದಾರರು ‘ಎಕ್ಸ್’ ನಲ್ಲಿ ಇದನ್ನು ನಗರದ ಈ ವರ್ಷದ ಅತಿ ಹೆಚ್ಚು ಮಳೆ … Continued

‘ಅಜೇಯ ಬೆಂಕಿಯ ಗೋಡೆ’: ಆಪರೇಷನ್ ಸಿಂಧೂರದ ಹೊಸ ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ | ವೀಕ್ಷಿಸಿ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿನ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಹೊಸ ವೀಡಿಯೊವನ್ನು ಭಾರತೀಯ ಸೇನೆ ಭಾನುವಾರ ಹಂಚಿಕೊಂಡಿದೆ. ಸೇನೆಯ ವೆಸ್ಟರ್ನ್ ಕಮಾಂಡ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ “ಶತ್ರು ಕ್ಷಿಪಣಿಗಳು ತಟಸ್ಥಗೊಳಿಸಲ್ಪಟ್ಟವು…ಭಾರತೀಯ ಸೇನೆ … Continued