ವಾಯುಭಾರ ಕುಸಿತ : ಕರ್ನಾಟಕದಲ್ಲಿ ಮೇ 24ರ ವರೆಗೆ ಭಾರಿ ಮಳೆ ಮುನ್ನೆಚ್ಚರಿಕೆ ; 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಕರ್ನಾಟಕದಾದ್ಯಂತ ಮೇ 24ರ ವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.
ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಇದೆ. ಅರಬ್ಬೀ ಸಮುದ್ರದ ರಾಜ್ಯದ ಕರಾವಳಿಯ ಬಳಿ ಮೇ 22 ರಂದು ವಾಯುಭಾರ ಕುಸಿತ ಆಗಲಿದೆ. ಇದರ ಪ್ರಭಾವದಿಂದ ಮೇ 24ರ ವರೆಗೆ ಕರ್ನಾಟಕದಾದ್ಯಂತ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಅತಿ ಭಾರಿ ಮಳೆಯಾಗುವ ನಿರೀಕ್ಷೆಯ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೇ 21 ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕೊಪ್ಪಳ ಜಿಲ್ಲೆಗಳಿಗೆ ಭಾರಿ ಮಳೆಯ ನಿರೀಕ್ಷೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 24ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ತತ್ತರ ; ಬುಲ್ಡೋಜರ್‌ ನಲ್ಲಿ ಪರಿಸ್ಥಿತಿ ವೀಕ್ಷಿಸಿದ ಶಾಸಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement