ಅಮೃತಸರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತೀಕಾರವಾಗಿ ಮೇ 7-8ರ ಮಧ್ಯರಾತ್ರಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರದ ಸ್ವರ್ಣ ಮಂದಿರದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು ಎಂದು 15 ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಸೋಮವಾರ ಬಹಿರಂಗಪಡಿಸಿದ್ದಾರೆ.
ಸೇನಾ ವಾಯು ರಕ್ಷಣಾ ಗನ್ನರ್‌ಗಳು ಸುವರ್ಣ ಮಂದಿರವನ್ನು ಟಾರ್ಗೆಟ್ ಮಾಡಿ ದಾಳಿ ಮಾಡಿದ್ದ ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಪಾಕಿಸ್ತಾನವು ಸ್ವರ್ಣ ಮಂದಿರದಂತಹ ಧಾರ್ಮಿಕ ಸ್ಥಳಗಳು ಸೇರಿದಂತೆ, ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಬಹುದು ಎಂದು ಸೇನೆ ಮೊದಲೇ ನಿರೀಕ್ಷಿಸಿತ್ತು, ಅದಕ್ಕೆ ಬೇಕಾದ ಕ್ರಮಗಳನ್ನು ಕೂಡ ತೆಗೆದುಕೊಂಡಿತ್ತು. ಪಾಕಿಸ್ತಾನ ಸೇನೆಯು ಯಾವುದೇ ಸಮರ್ಪಕ ಗುರಿಗಳನ್ನು ಹೊಂದಿಲ್ಲ ಎಂದು ತಿಳಿದಿದ್ದರೂ, ಕೆಲವು ನಿರೀಕ್ಷೆಗಳಿದ್ದವು ಇವುಗಳಲ್ಲಿ, ಗೋಲ್ಡನ್ ಟೆಂಪಲ್ ಅತ್ಯಂತ ಪ್ರಮುಖವಾದದ್ದು ಎಂದು ಕಂಡುಬಂದಿದೆ.
ಗೋಲ್ಡನ್ ಟೆಂಪಲ್‌ಗೆ ಸಮಗ್ರ ವಾಯು ರಕ್ಷಣಾ ಛತ್ರಿ ಹೊದಿಕೆಯನ್ನು ನೀಡಲು ನಾವು ಹೆಚ್ಚುವರಿ ಆಧುನಿಕ ವಾಯು ರಕ್ಷಣಾ ವ್ಯವಸ್ಥೆಗಳನ್ನು ಸಜ್ಜುಗೊಳಿಸಿದ್ದೇವೆ” ಎಂದು ಮೇಜರ್ ಜನರಲ್ ಶೇಷಾದ್ರಿ ತಿಳಿಸಿದ್ದಾರೆ.
“ಮೇ 8 ರಂದು ನಸುಕಿನ, ಕತ್ತಲೆಯ ಸಮಯದಲ್ಲಿ, ಪಾಕಿಸ್ತಾನವು ಮಾನವರಹಿತ ವೈಮಾನಿಕ ಶಸ್ತ್ರಾಸ್ತ್ರಗಳು, ಮುಖ್ಯವಾಗಿ ಡ್ರೋನ್‌ಗಳು ಮತ್ತು ದೀರ್ಘ-ಶ್ರೇಣಿಯ ಕ್ಷಿಪಣಿಗಳೊಂದಿಗೆ ಬೃಹತ್ ವಾಯುದಾಳಿಯನ್ನು ನಡೆಸಿತು. ನಾವು ಇದನ್ನು ನಿರೀಕ್ಷಿಸಿದ್ದರಿಂದ ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೆವು ಮತ್ತು ನಮ್ಮ ಧೈರ್ಯಶಾಲಿ ಮತ್ತು ಜಾಗರೂಕ ಸೇನಾ ವಾಯು ರಕ್ಷಣಾ ಗನ್ನರ್‌ಗಳು ಪಾಕಿಸ್ತಾನ ಸೇನೆಯ ದುಷ್ಟ ವಿನ್ಯಾಸಗಳನ್ನು ವಿಫಲಗೊಳಿಸಿದರು ಮತ್ತು ಸ್ವರ್ಣ ದೇವಾಲಯವನ್ನು ಗುರಿಯಾಗಿರಿಸಿಕೊಂಡು ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದರು, ಹೀಗಾಗಿ, ನಮ್ಮ ಪವಿತ್ರ ಸ್ವರ್ಣ ದೇವಾಲಯದ ಮೇಲೆ ಒಂದು ಗೀರು ಕೂಡ ಬೀಳಲು ಅವಕಾಶ ನೀಡಲಿಲ್ಲ” ಎಂದು ಶೇಷಾದ್ರಿ ಹೇಳಿದ್ದಾರೆ.
ಆಕಾಶ ಕ್ಷಿಪಣಿ ವ್ಯವಸ್ಥೆ, ಎಲ್ -70 ಏರ್ ಡಿಫೆನ್ಸ್ ಗನ್ಸ್ ಸೇರಿದಂತೆ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳು ಅಮೃತಸರದ ಸ್ವರ್ಣ ದೇವಾಲಯ ಮತ್ತು ಪಂಜಾಬ್ ನಗರಗಳನ್ನು ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದ ಹೇಗೆ ರಕ್ಷಿಸಿದವು ಎಂಬುದರ ಕುರಿತು ಅವರು ಮಾತನಾಡಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ 26 ಜನರ ಸಾವಿಗೆ ಪ್ರತಿಕ್ರಿಯೆಯಾಗಿ ಭಾರತವು ಮೇ 7 ರ ಆರಂಭದಲ್ಲಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯದ ಮೇಲೆ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಯ ಅಡಿಯಲ್ಲಿ ನಿಖರವಾದ ದಾಳಿಗಳನ್ನು ನಡೆಸಿತು.
ನಿಮ್ಮ ಕಾಮೆಂಟ್ ಬರೆಯಿರಿ