ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಸಹಕಾರ ಸಚಿವ ಕೆ. ಎನ್‌ ರಾಜಣ್ಣ…!

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಚುನಾವಣಾ ರಾಜಕಾರಣಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ.
ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯಿತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದ್ದಾರೆ.
ಮುಂದಿನ ಚುನಾವಣೆ ಬರುವ ವೇಳೆಗೆ ನನಗೆ 78 ವರ್ಷ ಆಗಲಿದೆ. ಚುನಾವಣೆಗೆ ನಿಂತು ಗೆದ್ದರೂ ಆರೋಗ್ಯದ ದೃಷ್ಟಿಯಿಂದ ಜನರ ಸೇವೆ ಮಾಡುವುದಕ್ಕೆ ಆಗುವುದಿಲ್ಲ. ಯುವಕರಿಗೆ ಅವಕಾಶ ನೀಡಬೇಕು ಅನ್ನೋದು ನನ್ನ ಅಭಿಪ್ರಾಯ. ಚುನಾವಣೆ ರಾಜಕಾರಣಕ್ಕೆ ನಾನು ಗುಡ್ ಬೈ ಹೇಳುತ್ತೇನೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

ತನ್ವೀರ್‌ ಸೇಠ್ ಹೇಳಿಕೆಗೆ ತಿರುಗೇಟು
ಕೆಲ ಸಚಿವರನ್ನು ಕೈಬಿಡಲಾಗುತ್ತದೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಹೀಗೆ ಹೇಳಲು ತನ್ವಿರ್ ಸೇಠ್ ಸಚಿವರ ಬದಲಾವಣೆ ಬಗ್ಗೆ ನಿರ್ಧಾರ ತೆಗೆದುಕೊಳ್ತಾರಾ ಎಂದು ಪ್ರಶ್ನಿಸಿದ ಅವರು, ಸಚಿವರ ಬದಲಾವಣೆ ತೀರ್ಮಾನ ಮಾಡುವುದು ಹೈಕಮಾಂಡ್‌. ಎಲ್ಲವನ್ನೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ, ಸಚಿವರು ಸೇರಿದಂತೆ ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
ಹಾಲಿ ಮಧುಗಿರಿ ಕ್ಷೇತ್ರದ ಶಾಸಕರಾಗಿರುವ ಕೆ. ಎನ್. ರಾಜಣ್ಣ 2023ರ ವಿಧಾನಸಭೆ ಚುನಾವಣೆಯಲ್ಲಿ 91,166 ಮತಗಳನ್ನು ಪಡೆದು ಜೆಡಿಎಸ್‌ನ ಎಂ. ವಿ. ವೀರಭದ್ರಯ್ಯ ಸೋಲಿಸಿ ಅವರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ಸಹಕಾರ ಸಚಿವರಾಗಿದ್ದಾರೆ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹೌದು.

ಪ್ರಮುಖ ಸುದ್ದಿ :-   ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement