ರಾಜ್ಯದ ಪ್ರಭಾರ ಡಿಜಿ-ಐಜಿಪಿಯಾಗಿ ಡಾ.ಎಂ.ಎ. ಸಲೀಂ ನೇಮಕ

ಬೆಂಗಳೂರು : ರಾಜ್ಯ ಪ್ರಭಾರಿ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ)ರಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ನೇಮಕವಾಗಿದ್ದಾರೆ.
ಅಲೋಕಮೋಹನ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಗೆ ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಸಂಜೆ ಅಧಿಕಾರ ವಹಿಸಿಕೊಂಡಿದ್ದಾರೆ.
ಕೇಂದ್ರ ಲೋಕಸೇವಾ ಆಯೋಗದ ಸಮ್ಮತಿ ಬಳಿಕ ಅವರನ್ನು ಕಾಯಂಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೇವಾ ಹಿರಿತನ ಆಧಾರದ ಮೇರೆಗೆ ಡಿಜಿ-ಐಜಿಪಿ ಹುದ್ದೆಗೆ ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತಕುಮಾರ ಠಾಕೂರ, ಸಿಐಡಿ ಡಿಜಿಪಿ ಸಲೀಂ, ಸೈಬರ್ ವಿಭಾಗದ ಡಿಜಿಪಿ ಪ್ರಣವ ಮೊಹಂತಿ ಸೇರಿ ಏಳು ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿದ್ದರು.
ರಾಜ್ಯ ಡಿಜಿ-ಐಜಿಪಿಯಾಗಿದ್ದ ಡಾ. ಅಲೋಕಮೋಹನ ಮೇ 21ರಂದು ಸೇವೆಯಿಂದ ನಿವೃತ್ತರಾಗಿದ್ದಾರೆ. ಹೀಗಾಗಿ 1993ನೇ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಹಾಗೂ ಹಾಲಿ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಹಂಗಾಮಿ ಡಿಜಿ ಐಜಿಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1993ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿರುವ ಇವರು, ಪೊಲೀಸ್‌ ಇಲಾಖೆಯಲ್ಲಿ ಕಳೆದ 30 ವರ್ಷಗಳಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕುಶಾಲನಗರ ಎಎಸ್‌ಪಿಯಾಗಿ 1995ರಲ್ಲಿ ನೇಮಕಗೊಳ್ಳುವ ಮೂಲಕ ತಮ್ಮ ವೃತ್ತಿ ಆರಂಭಿಸಿದ್ದ ಸಲಿಂ ಅವರು 1998ರಲ್ಲಿ ಉಡುಪಿ ಪೊಲೀಸ್ ಅಧೀಕ್ಷಕರಾಗಿ ಎಸ್‌ಪಿ ಹುದ್ದೆಗೇರಿದ್ದರು.
ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾಗಿ, ಮೈಸೂರು ನಗರದ ಪೊಲೀಸ್ ಆಯುಕ್ತರಾಗಿ ಮತ್ತು ಬೆಂಗಳೂರಿನ ವಿಶೇಷ ಪೊಲೀಸ್ ಆಯುಕ್ತರಾಗಿ, ಪೊಲೀಸ್ ಇಲಾಖೆಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನೂ ಮುನ್ನಡೆಸಿದ್ದ ಇವರು ಪ್ರಸ್ತುತ ಸಿಐಡಿ ಡಿಜಿಪಿ ಹುದ್ದೆಯಲ್ಲಿದ್ದಾರೆ. ಇದೀಗ ಇವರನ್ನು ಹಂಗಾಮಿ ಡಿಜಿ-ಐಜಿಪಿಯಾಗಿ ಸರ್ಕಾರ ನೇಮಕ ಮಾಡಿದೆ.

ಪ್ರಮುಖ ಸುದ್ದಿ :-   ಬೆಂಗಳೂರು | ಸೂಟ್‌ಕೇಸ್‌ ನಲ್ಲಿ ಹುಡುಗಿಯ ಶವ ಪತ್ತೆ, ಚಲಿಸುತ್ತಿರುವ ರೈಲಿನಿಂದ ಎಸೆದಿರುವ ಶಂಕೆ

.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement