ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್‌ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ ಬಳಿ ಇರುವ ಎಫ್‌ಬಿಐನ ವಾಷಿಂಗ್ಟನ್ ಫೀಲ್ಡ್ ಕಚೇರಿಯ ಎದುರಿನ ಗುಂಡಿನ ದಾಳಿಯನ್ನು ತನಿಖೆ ನಡೆಸುತ್ತಿದ್ದಾರೆ. ಇಸ್ರೇಲಿ ರಾಯಭಾರ ಕಚೇರಿಯು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ.
ಗುಂಡಿನ ದಾಳಿ ನಡೆದಾಗ ಇಸ್ರೇಲಿ ರಾಯಭಾರಿ ಸ್ಥಳದಲ್ಲಿ ಇರಲಿಲ್ಲ ಎಂದು ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಸಿಎನ್‌ಎನ್‌ಗೆ ತಿಳಿಸಿದ್ದಾರೆ.

ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದಲ್ಲಿ ನಡೆದ ಯಹೂದಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ಇಬ್ಬರು ರಾಯಭಾರ ಕಚೇರಿಯ ಸಿಬ್ಬಂದಿಗೆ ಹತ್ತಿರದಿಂದ ಗುಂಡು ಹಾರಿಸಲಾಯಿತು ಎಂದು ವಾಷಿಂಗ್ಟನ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ವಕ್ತಾರ ತಾಲ್ ನಯಿಮ್ ಕೊಹೆನ್ ನಂತರ ಹೇಳಿಕೆಯಲ್ಲಿ ದೃಢಪಡಿಸಿದರು.
ಘಟನೆಯ ಸ್ವಲ್ಪ ಸಮಯದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದಲ್ಲಿ “ದ್ವೇಷ ಮತ್ತು ಮೂಲಭೂತವಾದಕ್ಕೆ ಸ್ಥಳವಿಲ್ಲ” ಎಂದು ಹೇಳಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಟ್ರಂಪ್ “ಈ ಭಯಾನಕ ಡಿ.ಸಿ. ಹತ್ಯೆಗಳು, ಸ್ಪಷ್ಟವಾಗಿ ಯೆಹೂದ್ಯ ವಿರೋಧಿತ್ವವನ್ನು ಆಧರಿಸಿವೆ, ಇದು ಈಗಲೇ ಕೊನೆಗೊಳ್ಳಬೇಕು! ದ್ವೇಷ ಮತ್ತು ಮೂಲಭೂತವಾದಕ್ಕೆ ಅಮೆರಿಕದಲ್ಲಿ ಸ್ಥಾನವಿಲ್ಲ. ಮೃತರ ಕುಟುಂಬಗಳಿಗೆ ಸಂತಾಪಗಳು. ಇಂತಹ ಘಟನೆಗಳು ಸಂಭವಿಸಬಹುದು ಎಂಬುದು ತುಂಬಾ ದುಃಖಕರ! ದೇವರು ನಿಮ್ಮೆಲ್ಲರನ್ನೂ ಆಶೀರ್ವದಿಸಲಿ ಎಂದು ಬರೆದಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement