ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಾಗಿದೆ. ಮೇ 25ರಂದು ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 26ರಂದು ಹಾಸನ, ಬೆಳಗಾವಿ, ಧಾರವಾಡ ಜಿಲ್ಲೆಗೆ ಆರೆಂಜ್ ಹಾಗೂ ಬೀದರ್, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮೇ 27ರಂದು ಕೆಲ ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೇ 29 ಮತ್ತು 30ರಂದು ರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ರಾಜ್ಯದ ಹಲವೆಡೆ ಶನಿವಾರ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ತಲಾ 16 ಸೆಂ.ಮೀ, ಕೊಡಗು ಜಿಲ್ಲೆ ಭಾಗಮಂಡಲದಲ್ಲಿ 10 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಉತ್ತರ ಕನ್ನಡ ಜಿಲ್ಲೆಯ ಮಂಕಿ, ಗೇರುಸೊಪ್ಪ ಮತ್ತು ಮಂಗಳೂರಿನಲ್ಲಿ ತಲಾ 8 ಸೆಂ.ಮೀ., ಕುಂದಾಪುರ, ಗೋಕರ್ಣ, ಅಂಕೋಲಾ ಮತ್ತು ಚಿಕ್ಕಮಗಳೂರು ಜಿಲ್ಲೆ ಕಳಸದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ