ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌

ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.
ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ ರಸ್ತೆಯಲ್ಲಿ ಬ್ಯಾರೀಕೆಡ್ ಅಳವಡಿಸಿ ಎಲ್ಲಾ ಮಾದರಿಯ ವಾಹನ ಸಂಚಾರವನ್ನು ತಾತ್ಕಾಲಿಕ ವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬದಲಿ ಮಾರ್ಗವನ್ನು ಬಳಸಲು ಸೂಚಿಸಲಾಗಿದೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು | ತನ್ನ ಒಪ್ಪಿಗೆಯಿಲ್ಲದೆ ಇನ್‌ಸ್ಟಾಗ್ರಾಮ್ ವೀಡಿಯೊ ಪೋಸ್ಟ್ ; ಮಹಿಳೆಯ ದೂರಿನ ನಂತರ ವ್ಯಕ್ತಿಯ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement