ಭಾರಿ ಮಳೆ ಮುನ್ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 27, 28 ರಂದು ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ ಮೇ 27 ಮತ್ತು28ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್‌ಇ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ಮೇ 28ರ ವರೆಗೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸಿಬಿಎಸ್‌ಇ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಪ್ರವಾಸಿಗರು / ಸಾರ್ವಜನಿಕರು ನದಿ ಹಾಗೂ ಸಮುದ್ರತೀರ ಮತ್ತು ಚಾರಣಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ. 24X7 ಕಂಟ್ರೋಲ್ ರೂಮ್ ನಂ. 1077 ಅಥವಾ 0824 2442590 ಸಂಪರ್ಕಿಸಲು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾದ ಗಾಳಿ ಮಳೆಯ ಮುನ್ಸೂಚನೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement