18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್‌

ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ.
18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ. ಘಟನೆ ಬಗ್ಗೆ ಎಲ್ಲ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕರು ಕೂಡ ನನಗೆ ಮನವಿ ಸಲ್ಲಿಸಿದ್ದರು. ಇನ್ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಶಾಸಕರ ಅಮಾನತು ಆದೇಶವನ್ನ ಹಿಂಪಡೆಯಲಾಗಿದೆ. 18 ಶಾಸಕರನ್ನು ಅಮಾನತು ಮಾಡಿ ಎರಡು ತಿಂಗಳಾಗಿದೆ. ಈಗ ಶಾಸಕರ ಅಮಾಮತು ಹಿಂಪಡೆದಿದ್ದೇನೆ. ಯಾವುದೇ ಷರತ್ತು ಇಲ್ಲ, ಆ ಸಮಯದಲ್ಲಿ ದುರ್ನಡತೆ ತೋರಿದ್ದಕ್ಕೆ ಕ್ರಮಕೈಗೊಂಡಿದ್ದೇನೆ ಎಂದು ಸ್ಪೀಕರ್​ ಯು.ಟಿ.ಖಾದರ್​ ಹೇಳಿದ್ದಾರೆ.
ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸಭೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮ, ವಿಪಕ್ಷ ನಾಯಕ ಆರ್​. ಅಶೋಕ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಕಾನೂನು ಸಚಿವ ಎಚ್​.ಕೆ.ಪಾಟೀಲ ಭಾಗಿಯಾಗಿದ್ದರು.

ಪ್ರಮುಖ ಸುದ್ದಿ :-   ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್‌ ಸೋಂಕಿತ ವ್ಯಕ್ತಿ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement